ಸರಕಾರಿ ಯೋಜನೆ

Ganga kalyana Scheme : ನವೆಂಬರ್ 29ರೊಳಗೆ ಅರ್ಜಿ ಸಲ್ಲಿಸಿ ಗಂಗಾ ಕಲ್ಯಾಣ ಉಚಿತ ಬೋರ್‌ವೆಲ್ ಪಡೆಯಿರಿ

WhatsApp Group Join Now
Telegram Group Join Now

2023-2024ನೇ ಸಾಲಿನ ಗಂಗಾಕಲ್ಯಾಣ ಉಚಿತ ನೀರಾವರಿ ಯೋಜನೆಯ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಈ ರೈತರಿಗೆ ನವೆಂಬರ್ 29 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

Ganga Kalyana Free Borewell Scheme 2023 : ರಾಜ್ಯ ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಗಂಗಾಕಲ್ಯಾಣ ಉಚಿತ ನೀರಾವರಿ ಯೋಜನೆಯ ಅರ್ಜಿ ಸಲ್ಲಿಕೆಗೆ ಅರ್ಜಿ ಆಹ್ವಾನಿದೆ. ಈಗಾಗಾಲೇ ಸಾಮಾನ್ಯ ರೈತರಿಗೆ ಅರ್ಜಿ ಸಲ್ಲಿಕೆಯ ಗಡುವು ಮುಗಿದಿದೆ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಈ ಅವಕಾಶ ಇದೇ ನವೆಂಬರ್ 29, 2023ರ ವರೆಗೂ ಇದೆ. ಅಷ್ಟರೊಳಗೇ ಕೆಳಗಿನ ಮಾಹಿತಿ ಆಧರಿಸಿ ಅರ್ಜಿ ಸಲ್ಲಿಸುವ ಮೂಲಕ ಈ ಸಮುದಾಯದ ರೈತರು ಉಚಿತ ಕೊಳವೆಬಾವಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: Service Security for Gram Panchayat staff : ಗ್ರಾಮ ಪಂಚಾಯತಿ ಜವಾನರು, ಸ್ವಚ್ಛತಾಗಾರರು, ಕರವಸೂಲಿಗಾರರು, ನೀರುಗಂಟಿಗಳಿಗೆ ರಾಜ್ಯ ಸರಕಾರದ ಬಂಪರ್ ಗಿಫ್ಟ್ | ಇನ್ಮುಂದೆ ಸಂಬಳಕ್ಕಿಲ್ಲ ಪರದಾಟ

ಸಹಾಯಧನ (Subsidy) ಎಷ್ಟು?

ಗಂಗಾಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು.

ಬೆAಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆಬಾವಿ ಯೋಜನೆಗೆ ಘಟಕವೆಚ್ಚ 4.75 ಲಕ್ಷ ರೂಪಾಯಿಗಳಲ್ಲಿ 4.25 ಲಕ್ಷ ರೂಪಾಯಿ ಸಹಾಯಧನ (Subsidy) ಸಿಗುತ್ತದೆ. ಈ ಮೊತ್ತದಲ್ಲಿ ಬೋರ್‌ವೆಲ್ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂಪಾಯಿ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.

ಉಳಿದ ಜಿಲ್ಲೆಗಳಿಗೆ ಘಟಕವೆಚ್ಚ 3.75 ಲಕ್ಷ ರೂಪಾಯಿಗಳಲ್ಲಿ 3.25 ಲಕ್ಷ ರೂಪಾಯಿ ಸಹಾಯಧನ (ಸಬ್ಸಿಡಿ) ಸಿಗುತ್ತದೆ. ಈ ಮೊತ್ತದಲ್ಲಿ ನೀರಾವರಿ ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000 ರೂಪಾಯಿ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.

ಇದನ್ನೂ ಓದಿ: ಹಸು ಖರೀದಿಗೆ ₹58,500 ರೂಪಾಯಿ ಸಹಾಯಧನ : ಕೂಡಲೇ ಅರ್ಜಿ ಸಲ್ಲಿಸಿ… subsidy for purchase of cow

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು

 • ಅರ್ಜಿದಾರರು ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಈ ಕೆಳಕಂಡ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
 • ಆಯಾ ಜಾತಿ ಮತ್ತು ಇದರ ಉಪಜಾತಿಗಳಿಗೆ ಸೇರಿರುವುದಕ್ಕೆ ಸಂಬAಧಿಸಿದ ತಾಲ್ಲೂಕು ತಹಶಿಲ್ದಾರ್‌ರಿಂದ ನಿಗದಿತ ನಮೂನೆಯಲ್ಲಿ ಪಡೆದ ಜಾತಿ/ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ.
 • ಅರ್ಜಿದಾರರ ವಾಸದ ಪುರಾವೆಗಾಗಿ ಸಕ್ಷಮ ಪ್ರಾಧಿಕಾರಿಗಳು ನೀಡಿದ ಪಡಿತರ ಚೀಟಿ / ಚುನಾವಣಾ ಗುರುತಿನ ಚೀಟಿ / ಆಧಾರ ಕಾರ್ಡ್ ದೃಢೀಕೃತ ಪ್ರತಿ ಒದಗಿಸಬೇಕು.
 • ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 3 ಫೋಟೋಗಳು, ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರುವ ಬಗ್ಗೆ ಕಂದಾಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
 • ಅರ್ಜಿದಾರರು ಹೊಂದಿರುವ ಜಮೀನಿನ ಕಂದಾಯ ದಾಖಲೆಗಳಾದ ಆರ್.ಟಿ.ಸಿ/ ಪಹಣಿ, ಖಾತಾ ಉದ್ದರಣೆ, ಪಟ್ಟಾ ಪುಸ್ತಕ, ಮುಟೇಶನ್, ಇ.ಸಿ. ವಂಶವೃಕ್ಷ, ಜಮೀನಿನ ಚೆಕ್ ಬಂದಿ.
 • ಅರ್ಜಿದಾರರು ನೀರಾವರಿ ಸೌಲಭ್ಯ ಹೊಂದಿಲ್ಲದೇ ಇರುವುದಕ್ಕೆ ಸ್ವಯಂ ಘೋಷಣೆ ಪತ್ರ.
 • ಘಟಕ ವೆಚ್ಚ 4.75 ಲಕ್ಷಕ್ಕಿಂತ ಹೆಚ್ಚಾದಲ್ಲಿ ಸಾಲ ಪಡೆಯುವ ಬಗ್ಗೆ ಫಲಾನುಭವಿಯಿಂದ ಒಪ್ಪಿಗೆ ಪತ್ರ.

ಇದನ್ನೂ ಓದಿ: PM KISAN 15th Installment : ಸಣ್ಣ ರೈತರ ಬ್ಯಾಂಕ್ ಖಾತೆಗೆ ₹2,000 ಹಣ ಜಮಾ | ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…

ಸೌಲಭ್ಯ ಪಡೆಯಲು ಮಾನದಂಡಗಳೇನು?

 • ಅರ್ಜಿದಾರರು ಮೇಲ್ಕಂಡ ಜಾತಿ, ಉಪಜಾತಿ, ಪ್ರವರ್ಗಕ್ಕೆ ಸೇರಿರಬೇಕು ಹಾಗೂ ಸಂಬ೦ಧಪಟ್ಟ ಪ್ರಾಧಿಕಾರದಿಂದ ಜಾತಿ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು.
 • ಹಾಲಿ ಜಮೀನುಗಳಿಗೆ ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಮಳೆ ಆಧಾರಿತವಾಗಿ ಖುಷ್ಕಿಯಾಗಿರಬೇಕು.
 • ಆಯಾ ಸಮುದಾಯಗಳ ಇಲಾಖೆ ವ್ಯಾಪ್ತಿಯಲ್ಲಿ ಒಳಪಡುವ ನಿಗಮಗಳಲ್ಲಿ ಬೇರೆ ಯಾವುದಾದರು ಯೋಜನೆಗಳಲ್ಲಿ ಸಾಲ ಅಥವಾ ಇತರೆ ಆರ್ಥಿಕ ಸೌಲಭ್ಯ ಪಡೆದಿರಬಾರದು.
 • ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂಪಾಯಿ ಹಾಗೂ ಪಟ್ಟಣ ಪ್ರದೇಶದವರಿಗೆ 1,20,000 ರೂಪಾಯಿ ಮಿತಿಯಲ್ಲಿರಬೇಕು.
 • Farmer’s FRUIT ID ಮತ್ತು ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು. ಜತೆಗೆ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಇದನ್ನೂ ಓದಿ: ತೋಟಗಾರಿಕೆ ಬೆಳೆಗಳಿಗೆ ನರೇಗಾ ಸಹಾಯಧನ: ಯಾವ ಬೆಳೆ ಎಷ್ಟು ಹಣ? ಅರ್ಜಿ ಸಲ್ಲಿಕೆ ಹೇಗೆ? Mnarega Subsidy for Horticulture Crops

ಯಾವೆಲ್ಲ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ?

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿಯಲ್ಲಿ ಬರುವ ವಿವಿಧ ಎಸ್‌ಸಿ / ಎಸ್‌ಟಿ ಜಾತಿ ಮತ್ತು ಅವುಗಳ ಉಪ ಜಾತಿಗೆ ಸೇರಿದ ಸಣ್ಣ ರೈತರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಕೆಳಕಂಡ ನಿಗಮಗಳ ವ್ಯಾಪ್ತಿಗೊಳಪಡುವ ಸಣ್ಣ ರೈತರು ಅರ್ಜಿ ಸಲ್ಲಿಸಬಹುದಾಗಿದೆ:

 1. ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ
 2. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
 3. ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ
 4. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ
 5. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ
 6. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
 7. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

ಇದನ್ನೂ ಓದಿ: ಎಫ್‌ಐಡಿ ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರ : ಇಲ್ಲಿದೆ ಕೃಷಿ ಇಲಾಖೆ ಪ್ರಕಣೆ FID Registration

ಎಲ್ಲಿ ಅರ್ಜಿ ಸಲ್ಲಿಸಬೇಕು? : ಗಂಗಾಕಲ್ಯಾಣ ನೀರಾವರಿ ಯೋಜನೆ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಹ ರೈತರು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್  http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಜನ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ದಿನಾಂಕ : ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿಯಲ್ಲಿ ಬರುವ ವಿವಿಧ ಎಸ್‌ಸಿ / ಎಸ್ಟಿ ಜನಾಂಗದ ಸಣ್ಣ ರೈತರು ಗಂಗಾಕಲ್ಯಾಣ ನೀರಾವರಿ ಯೋಜನೆ ಸೌಲಭ್ಯ ಪಡೆಯಲು ನವೆಂಬರ್ 29, 2023 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ : ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆಗೆ ನಿಮ್ಮ ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್ ಸೇವಾ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.
ಸಹಾಯವಾಣಿ 9482-300-400

Ganga Kalyana Free Borewell Scheme 2023 for Sc/St

kswdc karnataka Schemes : 2023-24ನೇ ಸಾಲಿನ ಮಹಿಳಾ ನಿಗಮದ ಬಂಪರ್ ಯೋಜನೆಗಳು : ಮಹಿಳೆಯರಿಗೆ ₹3 ಲಕ್ಷ ಬಡ್ಡಿ ಇಲ್ಲದ ಸಾಲ ಅರ್ಜಿ ಆಹ್ವಾನ @kswdc.karnataka.gov.in

WhatsApp Group Join Now
Telegram Group Join Now

Related Posts

error: Content is protected !!