ಪಶುಪಾಲನೆಸರಕಾರಿ ಯೋಜನೆ

ಕುರಿ-ಮೇಕೆ ಶೆಡ್, ದನದ ಕೊಟ್ಟಿಗೆ ನಿರ್ಮಾಣಕ್ಕೆ ₹70,000 ಸಹಾಯಧನ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

ನರೇಗಾ ಯೋಜನೆಯಡಿ ಕುರಿ-ಮೇಕೆ ಶೆಡ್, ದನದ ಕೊಟ್ಟಿಗೆ, ಕೋಳಿ ಶೆಡ್, ಹಂದಿ ಶೆಡ್ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಬರಗಾಲಗಾರ ಸಂಕಷ್ಟ ನೆರವಾಗಲು ರೈತರು, ಹೈನುಗಾರರು ಹಾಗೂ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮೂಲಕ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಗ್ರಾಮೀಣ ಭಾಗದ ಒಂದು ಅರ್ಹ ಕುಟುಂಬವು ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿಗಳ ವರಗೆ ವೈಯಕ್ತಿಕ ಕಾಮಗಾರಿ ಪಡೆಯಲು ಈ ಯೋಜನೆಯಡಿ ಅವಕಾಶವಿದೆ.

ಹಸು, ಎಮ್ಮೆ, ಕುರಿ, ಕೋಳಿ, ಹಂದಿ ಸಾಕಾಣಿಕೆ ಮೂಲಕ ಸ್ವಯಂ ಉದ್ಯೋಗ ಮಾಡಲಿಚ್ಛಿಸುವವರು ಶೆಡ್ ನಿರ್ಮಾಣದಂತಹ ವೈಯಕ್ತಿಕ ಕಾಮಗಾರಿ ಪಡೆಯಬಹುದು. ಗ್ರಾಮೀಣ ಪ್ರದೇಶದ ಜನರು ತಮಗೆ ಬೇಕಾದ ವೈಯಕ್ತಿಕ ಕಾಮಗಾರಿ ಪಡೆಯಲು ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ವೈಯಕ್ತಿಕ ಕಾಮಗಾರಿಯ ಹೆಸರು ನೋಂದಾಯಿಸಿಕೊ೦ಡರೆ ಹಲವು ಪ್ರಯೋಜನ ಸಿಗಲಿವೆ.

ಇದನ್ನೂ ಓದಿ: ಸಣ್ಣ ರೈತರಿಗೆ ಉಚಿತ ಬೋರ್’ವೆಲ್ : ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… 

ಪಶುಪಾಲನೆಗೆ ಭರ್ಜರಿ ಸಹಾಯಧನ

ಇಂದು ಆಡು-ಕುರಿ, ಆಕಳು, ಎಮ್ಮೆ, ಹಂದಿ, ಕೋಳಿ ಸೇರಿದಂತೆ ಒಟ್ಟಾರೆ ಪಶುಪಾಲನೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಿವೆ. ಇದಕ್ಕಾಗಿ ಸಾಕಷ್ಟು ಸಾಲ ಮತ್ತು ಸಹಾಯಧನ ಕೂಡ ಸಿಗುತ್ತಿದೆ. ಹೀಗಾಗಿ ಅನೇಕ ವಿದ್ಯಾವಂತ ಯುವಜನ ಪಶು ಸಂಗೋಪನೆಯಲ್ಲಿ ಆಸಕ್ತಿ ತೋರಿಸುತ್ತಿದ್ದಾರೆ. ಗ್ರಾಮೀಣ ಭಾಗದ ಜನತೆಗೆ ಜಾನುವಾರು ಸಾಕಾಣಿಕೆೆ ಬದುಕಿನ ಭಾಗವೇ ಆಗಿದೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾನುವಾರುಗಳ ಶೆಡ್ ನಿರ್ಮಾಣಕ್ಕೆ ಸಹಾಯಧನ ಪಡೆಯಬಹುದಾಗಿದೆ.

ಪರಿಷ್ಕೃತ ಆದೇಶದನ್ವಯ ಆಡು-ಕುರಿ, ಆಕಳು, ಎಮ್ಮೆ, ಹಂದಿ, ಕೋಳಿ ಶೆಡ್ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಸಿಗಲಿರುವ ಸಹಾಯಧನದ ಅಂದಾಜು ಮೊತ್ತ ಈ ಕೆಳಗಿನಂತಿದೆ:

  • ಕುರಿ ದೊಡ್ಡಿ ₹70,000
  • ಮೇಕೆ ಶೆಡ್ ₹70,000
  • ಹಂದಿ ಶೆಡ್ ₹87,000
  • ದನದ ಕೊಟ್ಟಿಗೆ ₹57,000
  • ಕೋಳಿ ಶೆಡ್ ₹60,000
ಇದನ್ನೂ ಓದಿ: ಕೃಷಿ ಹೊಂಡ, ಬದು ನಿರ್ಮಾಣ, ಬಚ್ಚಲು ಗುಂಡಿ ಮತ್ತು ತೋಟಗಾರಿಕೆ, ಕೃಷಿ ವೈಯಕ್ತಿಕ ಕಾಮಗಾರಿಗಳಿಗೆ ನರೇಗಾ ಸಹಾಯಧನ

ಈ ಸಹಾಯಧನ ಪಡೆಯುವುದು ಹೇಗೆ?

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಈ ಎಲ್ಲ ಸಹಾಯಧನ ಪಡೆಯಲು ಮುಖ್ಯವಾಗಿ ಫಲಾನುಭವಿಗಳು ಜಾಬ್ ಕಾರ್ಡ್ ಹೊಂದಿರಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ನಮೂನೆ 1ನ್ನು ಭರ್ತಿ ಮಾಡಿ ಕುಟುಂಬದ 18 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲಾ ಸದಸ್ಯರ ಇತ್ತೀಚಿನ ಭಾವಚಿತ್ರ, ವೈಯಕ್ತಿಕ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ ಇವುಗಳ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ಸಲ್ಲಿಸುವ ಮೂಲಕ ಜಾಬ್‌ಕಾರ್ಡ್ ಪಡೆಯಬಹುದು.

ಉದ್ಯೋಗ ಚೀಟಿ ಪಡೆಯಲು ಕುಟುಂಬದ ಪ್ರತಿಯೊಬ್ಬ ವಯಸ್ಕ ಸದಸ್ಯರ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಅಗತ್ಯ. ಉದ್ಯೋಗಕ್ಕಾಗಿ ನಮೂನೆ-6ರಲ್ಲಿ ಗ್ರಾಮ ಪಂಚಾಯ್ತಿಗೆ ಬೇಡಿಕೆ ಸಲ್ಲಿಸಿ, ಸ್ವೀಕೃತಿ ಪಡೆಯಿರಿ ಅಥವಾ ಮನೆಯಲ್ಲಿಯೇ ಕುಳಿತು ಕಾಯಕ ಮಿತ್ರಮೊಬೈಲ್ ಆ್ಯಪ್ ಮೂಲಕವೂ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ವಿದ್ಯುತ್ ಸಂಪರ್ಕ

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ (ಬರ ಪೀಡಿತ ಪ್ರದೇಶಗಳಲ್ಲಿ 150 ದಿನಗಳು) ಉದ್ಯೋಗ ಖಾತರಿ ನೀಡಲಾಗುತ್ತಿದೆ. ಮಹಿಳೆ ಮತ್ತು ಪುರುಷರು ಮಾತ್ರವಲ್ಲದೇ ವಿಶೇಷ ಚೇತನರು ಮತ್ತು 65 ವರ್ಷ ಮೇಲ್ಪಟ್ಟ ವೃದ್ಧರಿಗೂ ಇಲ್ಲಿ ವಿನಾಯಿತಿ ಸಹಿತ ಅವಕಾಶಗಳಿವೆ. ಈ ಯೋಜನೆಯಡಿ ನೋಂದಾಯಿತ ಒಂದು ಅರ್ಹ ಕುಟುಂಬ ತನ್ನ ಜೀವಿತಾವಧಿಯಲ್ಲಿ ಗರಿಷ್ಠ 5 ಲಕ್ಷ ರೂಪಾಯಿ ವರೆಗೆ ನೀಡಲಾಗುವ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ. ಬರಗಾಲದಿಂದ ಕಂಗಾಲಾಗಿರುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಈ ನೆರವು ಅತ್ಯಂತ ಸಹಕಾರಿಯಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಬುಡಕಟ್ಟುಗಳು, ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು, ಮಹಿಳಾ ಪ್ರಧಾನ ಕುಟುಂಬಗಳು, ವಿಕಲಚೇತನ ಕುಟುಂಬಗಳು, ಭೂ ಸುಧಾರಣಾ ಫಲಾನುಭವಿಗಳು, ವಸತಿ ಯೋಜನೆಯ ಫಲಾನುಭವಿಗಳು, ಅರಣ್ಯ ಹಕ್ಕು ಕಾಯ್ದೆ 2006ರ ಫಲಾನುಭವಿಗಳು ಹಾಗೂ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.

ಇದನ್ನೂ ಓದಿ: 324 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ: ಯಾವ ಜಿಲ್ಲೆಗೆ ಎಷ್ಟು ಪರಿಹಾರ ಇಲ್ಲಿದೆ ಸಂಪೂರ್ಣ ಮಾಹಿತಿ…

WhatsApp Group Join Now
Telegram Group Join Now

Related Posts

error: Content is protected !!