ಉದ್ಯೋಗ

SSC Recruitment 2022: SSLC ಪಾಸ್ ಆದವರಿಗೆ ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ , 24,369 ಹುದ್ದೆಗಳು

WhatsApp Group Join Now
Telegram Group Join Now

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಕಾನ್‌ಸ್ಟೆಬಲ್ ನೇಮಕಾತಿ ಪ್ರಕ್ರಿಯೆ ನಡೆಸಲು ಅಧಿಸೂಚನೆ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಹೇಗೆ? ವೇತನ, ವಯೋಮಾನ, ಆಯ್ಕೆ ಪ್ರಕ್ರಿಯೆ ಇತ್ಯಾದಿ ಸಂಪೂರ್ಣ ಮಾಹಿತಿ ಇಲ್ಲಿದೆ…

ಇದೊಂದು ಬೃಹತ್ ಪೊಲೀಸ್ ನೇಮಕಾತಿ. ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (ಎಸ್‌ಎಸ್‌ಸಿ) ಕೇಂದ್ರೀಯ ಸಶಸ್ತ್ರ ಪೊಲಿಸ್ ಪಡೆಯಲ್ಲಿ ಭಾರಿ ಪ್ರಮಾಣದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲು ಅಧಿಸೂಚನೆ ಹೊರಡಿಸಿದೆ. ಏಕಕಾಲಕ್ಕೆ ಬರೋಬ್ಬರಿ 24,369 ಕಾನ್‌ಸ್ಟೆಬಲ್ (ಸಾಮಾನ್ಯ ಕರ್ತವ್ಯ) ಹುದ್ದೆಗಳಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಪೈಕಿ ಮಹಿಳೆಯರಿಗಾಗಿಯೇ ಭರ್ತಿ 2,600ಕ್ಕೂ ಹೆಚ್ಚು ಹುದ್ದೆಗಳು ಮೀಸಲಾಗಿದೆ. ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕನಿಷ್ಠ 18, ಗರಿಷ್ಠ 23 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿಗೆ ಅನುಗುಣವಾಗಿ ಹುದ್ದೆಗಳನ್ನು ವಿಂಗಡಿಸಲಾಗಿದೆ. 21,700- 69,000 ರೂ.ವರೆಗೆ ವೇತನ ಶ್ರೇಣಿಯಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 30 ಕೊನೆಯ ದಿನ. ಕಂಪ್ಯೂಟರ್ ಆಧಾರಿತ ಪರೀಕ್ಷೆ 2023ರ ಜನವರಿಯಲ್ಲಿ ನಡೆಯಲಿದೆ. ಮಾಹಿತಿಗೆ

ಹುದ್ದೆಗಳ ವಿವರ:

  1. ಗಡಿ ಭದ್ರತಾ ಪಡೆ: 10497 ಹುದ್ದೆಗಳು
  2. ಕೇಂದ್ರ ಕೈಗಾರಿಕಾ ಭದ್ರತಾ ಪಡೆ: 100 ಹುದ್ದೆಗಳು
  3. ಸಶಸ್ತ್ರ ಸೀಮಾ ಬಲ್: 1284 ಹುದ್ದೆಗಳು
  4. ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್: 1613 ಹುದ್ದೆಗಳು
  5. ಅಸ್ಸಾಂ ರೈಫಲ್ಸ್: 1687 ಹುದ್ದೆಗಳು
  6. ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್: 103 ಹುದ್ದೆಗಳು

ಒಟ್ಟು ಹುದ್ದೆಗಳು: 24,369

ಇದನ್ನೂ ಓದಿ: SSLC, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ₹18,000- ₹81,000 ಸಾವಿರ ಸಂಬಳದ ಹುದ್ದೆಗಳಿಗೆ ಅರ್ಜಿ ಆಹ್ವಾನ… 

ವಿದ್ಯಾರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಉತ್ತೀರ್ಣರಾದರೆ ಸಾಕು.

ವಯೋಮಿತಿ: ಕನಿಷ್ಠ ವಯಸ್ಸು 18ವರ್ಷ, ಗರಿಷ್ಠ ವಯೋಮಿತಿ: 23 ವರ್ಷ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,700 ರೂಪಾಯಿಯಿಂದ 69,000 ರೂಪಾಯಿ ಶ್ರೇಣಿಯಲ್ಲಿ ವೇತನ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕೆಎಂಎಫ್ 487 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೇಹದಾರ್ಡ್ಯತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ 100 ರೂಪಾಯಿ. ಎಸ್ಸಿ, ಎಸ್ಟಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅಪ್ಲಿಕೇಶನ್ ಶುಲ್ಕವನ್ನು ನೆಟ್‌ಬ್ಯಾಂಕಿಂಗ್, ಎಸ್‌ಬಿಐ ಚಲನ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಕೆ ದಿನಾಂಕ:

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 27-10-2022

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-11-2022ರ ರಾತ್ರಿ 11 ಗಂಟೆ ವರೆಗೆ

ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 01-12-2022ರ ರಾತ್ರಿ 11 ಗಂಟೆವರೆಗೆ

ಚಲನ್ ಮೂಲಕ ಅಪ್ಲಿಕೇಶನ್ ಶುಲ್ಕ ಪಾವತಿಸಲು ಕೊನೆ ದಿನಾಂಕ : 30-11-2022

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಸಂಪೂರ್ಣ ನೋಟಿಫಿಕೇಷನ್ ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ನವೆಂಬರ್ 1ರಿಂದ ಪ್ರತಿ ಲೀಟರ್ ಹಾಲಿಗೆ ಸಿಗಲಿದೆ 2.5 ರೂಪಾಯಿ ವಿಶೇಷ ಪ್ರೋತ್ಸಾಹಧನ

WhatsApp Group Join Now
Telegram Group Join Now

Related Posts

error: Content is protected !!