ಉದ್ಯೋಗ

SSLC ಅಭ್ಯರ್ಥಿಗಳಿಂದ 11,409 ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೇಂದ್ರ ಸರಕಾರದ ನೌಕರಿ | ಕನ್ನಡದಲ್ಲಿ ಪರೀಕ್ಷೆ | SSC Recruitment 2023

WhatsApp Group Join Now
Telegram Group Join Now

ಕೇದ್ರ ಸಿಬ್ಬಂದಿ ನೇಮಕಾತಿ ಆಯೋಗವು (SSC) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಪರೀಕ್ಷೆ ಬರೆದು ಕೇಂದ್ರ ಸರಕಾರಿ ನೌಕರಿ ಪಡೆಯುವ ಸುವರ್ಣಾವಕಾಶ ಇದಾಗಿದೆ. ರೈತ ಮಕ್ಕಳೇ ಈ ಅವಕಾಶ ಸದ್ಭಳಕೆ ಮಾಡಿಕೊಳ್ಳಿ. ಅರ್ಜಿ ಸಲ್ಲಿಕೆಯ ಸಮಗ್ರ ಮಾಹಿತಿ ಇಲ್ಲಿದೆ…

ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಗೆ ಕೇಂದ್ರ ಸರಕಾರದ ಉದ್ಯೋಗ ಪಡೆಯುವ ಸುವರ್ಣಾವಕಾಶ ಒದಗಿ ಬಂದಿದೆ. ಕೇದ್ರ ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಕೇಂದ್ರದ ವಿವಿಧ ಸಚಿವಾಲಯ, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಸಿ ಗ್ರೂಪ್‌ನ ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಮತ್ತು ಹವಾಲ್ದಾರ್ ಹುದ್ದೆಗಳ ಬೃಹತ್ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: ಸದ್ಯದಲ್ಲೇ ಒಂದು ಲಕ್ಷ ರಾಜ್ಯ ಸರಕಾರಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ

ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)- 10,880 ಹಾಗೂ ಹವಾಲ್ದಾರ್- 529 ಹುದ್ದೆಗಳು ಸೇರಿ ಒಟ್ಟು 11,409 ಹುದ್ದೆಗಳಿಗೆ ನೇಮಕ ನಡೆಯಲಿದೆ. ವಿವಿಧ ಇಲಾಖೆಗಳಲ್ಲಿನ ಒಟ್ಟು 10,880 ಎಂಟಿಎಸ್ ಹುದ್ದೆಗಳಿಗೆ ಹಾಗೂ ಸುಂಕ ಮತ್ತು ಪರೋಕ್ಷ ತೆರಿಗೆಯ ಕೇಂದ್ರೀಯ ಮಂಡಳಿ (CBIC) ಮತ್ತು ನರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋನಲ್ಲಿನ (CBN) 529 ಹವಾಲ್ದಾರ್ ಹುದ್ದೆಗಳಿಗೆ ಈ ನೇಮಕ ನಡೆಯಲಿದೆ.

ವಿದ್ಯಾರ್ಹತೆ ಎಷ್ಟಿರಬೇಕು?

ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹವಾಲ್ದಾರ್ ಹುದ್ದೆಗೆ ಅರ್ಜಿ ಸಲ್ಲಿಸುವ ಪುರಷ ಅಭ್ಯರ್ಥಿಗಳು 157.5 ಸೆಂ.ಮೀ. ಎತ್ತರವಿರಬೇಕು. ಎದೆಯ ಸುತ್ತಳತೆಯು 81 ಸೆಂ.ಮೀ ಇರಬೇಕು. ಮಹಿಳಾ ಅಭ್ಯರ್ಥಿಗಳು 152 ಸೆಂ.ಮೀ ಎತ್ತರವಿರಬೇಕು. 48 ಕೆಜಿ ತೂಕವಿರಬೇಕು.

ಇದನ್ನೂ ಓದಿ: SSLC ಪಾಸಾದವರಿಂದ ರೈಲ್ವೇ ಇಲಾಖೆಯ 4,103 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಂಬಳ ಎಷ್ಟು?

ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಪೇ ಮ್ಯಾಟ್ರಿಕ್ಸ್ ಪ್ರಕಾರ ಸಂಬಳ ನಿಗದಿಪಡಿಸಲಾಗಿದೆ.

ವಯೋಮಿತಿ ಎಷ್ಟು?

ಕೆಲವು ಹುದ್ದೆಗಳಿಗೆ 18-25 ಮತ್ತೆ ಕೆಲವು ಹುದ್ದೆಳಿಗೆ 18-27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿಯಲ್ಲಿ  OBC ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ, PwBD (UR) ಅಭ್ಯರ್ಥಿಗಳಿಗೆ 10 ವರ್ಷ, PwBD (OBC) ಅಭ್ಯರ್ಥಿಗಳಿಗೆ 13 ವರ್ಷ ಹಾಗೂ PwBD (SC/ST) ಅಭ್ಯರ್ಥಿಗಳಿಗೆ 15 ವರ್ಷಗಳು ವಯೋಮಿತಿ ಸಡಿಲಿಕೆ ಇದೆ.

ಇದನ್ನೂ ಓದಿ: ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಅರ್ಜಿ ಶುಲ್ಕವೆಷ್ಟು?

ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಮಹಿಳಾ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಶುಲ್ಕವನ್ನು ಆನ್‌ಲೈನ್ ಅಥವಾ ಎಸ್‌ಬಿಐ ಬ್ಯಾಂಕ್  ಚಲನ್ ಮೂಲಕ ಪಾವತಿಸಬಹುದಾಗಿದೆ.

ನೇಮಕ ಹೇಗೆ?

ಮೊದಲಿಗೆ ಕಂಪ್ಯೂಟರ್ ಆಧಾರಿತ ಎರಡು ಹಂತದ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ, ಅಗತ್ಯವಿದ್ದರೆ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ. ಅಗತ್ಯವಿಲ್ಲದ ಹುದ್ದೆಗಳಿಗೆ ನೇರವಾಗಿ ದಾಖಲೆ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಪರೀಕ್ಷೆಗಳು ಹೇಗಿರುತ್ತವೆ, ಯಾವೆಲ್ಲಾ ವಿಷಯಗಳನ್ನು ಒಳಗೊಂಡಿರುತ್ತದೆ ಎಂಬ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ | 1.4 ಲಕ್ಷ ವಿದ್ಯಾರ್ಥಿಗಳು ನಿರೀಕ್ಷೆಯಲ್ಲಿ

ಕನ್ನಡದಲ್ಲಿ ನಡೆಯಲಿದೆ ಪರೀಕ್ಷೆ

ವಿಶೇಷವೆಂದರೆ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಈ ಬಾರಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಕನ್ನಡ ಸೇರಿ ದೇಶದ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದು ಎಂದು ಅಧಿಸೂಚನೆಯಲ್ಲಿ ಘೋಷಿಸಿದೆ. ಈ ಮೊದಲು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯಬೇಕಿತ್ತು. ಕನ್ನಡದಲ್ಲಿ ಟಿಪ್ಪಣಿಯೊಂದನ್ನು (ಪತ್ರ ಲೇಖನ) ಬರೆಯುವ ಅವಕಾಶವಿತ್ತು. ಆದರೆ, ಇದು ಅರ್ಹತಾದಾಯಕ ಪತ್ರಿಕೆಯಾಗಿದ್ದು, ಇದರ ಅಂಕಗಳನ್ನು ನೇಮಕಕ್ಕೆ ಪರಿಗಣಿಸುತ್ತಿರಲಿಲ್ಲ. ಈಗ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನೇ ಕನ್ನಡದಲ್ಲಿ ಬರೆಯಬಹುದು. ಇದರೊಂದಿಗೆ ಅಸ್ಸಾಮಿ, ಬೆಂಗಾಳಿ, ಗುಜರಾತಿ, ಕೊಂಕಣಿ, ಮಲಯಾಳಂ, ಮಣಿಪುರಿ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಉರ್ದು ಭಾಷೆಗಳನ್ನು ಪರೀಕ್ಷೆಗೆ ಪರಿಗಣಿಸಲಾಗಿದೆ.

ಇದೋ  ಕನ್ನಡಿಗರಿಗೆ ಸುವರ್ಣಾವಕಾಶ

ಎಸ್‌ಎಸ್‌ಸಿಯಿಂದ ನಡೆಸುವ ಎಲ್ಲ ಪರೀಕ್ಷೆಗಳು ರಾಷ್ಟ್ರಮಟ್ಟದ ಪರೀಕ್ಷೆಯಾಗಿದ್ದು; ಹಿಂದಿಯಲ್ಲಿ ಪರೀಕ್ಷೆ ನಡೆಸುತ್ತಿದ್ದರಿಂದ ಹಿಂದಿ ಭಾಷಿಕರು ಸುಲಭವಾಗಿ ಈ ಹುದ್ದೆಗಳಿಗೆ ಆಯ್ಕೆಯಾಗುತ್ತಿದ್ದರು. ರಾಜ್ಯದ ಹುದ್ದೆಗಳಿಗೆ ಸ್ಥಳೀಯರಿಗೆ ಮೀಸಲಾತಿ ಇಲ್ಲದಿರುವುದರಿಂದ ಹೆಚ್ಚಿನ ಅಂಕ ಪಡೆದವರು ತಮಗಿಷ್ಟವಾದ ರಾಜ್ಯಗಳನ್ನು ಆಯ್ದುಕೊಂಡು ಎಲ್ಲೆಡೆ ಆಕ್ರಮಿಸಿಕೊಳ್ಳುತ್ತಿದ್ದರು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯ ಹುದ್ದೆಗಳಾಗಿರುವುದರಿಂದ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಬರೆಯಲು ಅಸಮರ್ಥರಾಗುತ್ತಿದ್ದ ರಾಜ್ಯದ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಹುದ್ದೆಗಳಿಂದ ವಂಚಿತರಾಗುತ್ತಿದ್ದರು. ಇದೀಗ ಕನ್ನಡದಲ್ಲೂ ಪರೀಕ್ಷೆ ಬರೆಯುವ ಅವಕಾಶ ಸಿಕ್ಕಿರುವುದರಿಂದ ರಾಜ್ಯದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಬಹುದು.

ಇದನ್ನೂ ಓದಿ: SSLC ಪಾಸಾದವರಿಂದ HAL ಫೈಯರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ತುಮಕೂರಿನಲ್ಲಿ ಕೆಲಸ

ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ?

ಈ ನೇಮಕಾತಿಯಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು (Computer Based Examination) ಇದೇ ಮೊದಲ ಬಾರಿಗೆ ಕನ್ನಡಲ್ಲೂ ಬರೆಯಬಹುದಾಗಿದೆ ಎಂದು ಎಸ್‌ಎಸ್‌ಸಿಯು ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ರಾಜ್ಯದ ಅಭ್ಯರ್ಥಿಗಳು ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಲು 08 ಕೋಡ್ ಬಳಸಬಹುದು. ರಾಜ್ಯದ ಒಟ್ಟು 08 ಜಿಲ್ಲಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತದೆ. ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಪರೀಕ್ಷಾ ಕೇಂದ್ರಗಳು ಇರಲಿದೆ.

ಅರ್ಜಿ ಸಲ್ಲಿಕೆ ದಿನಾಂಕ

ಕೇದ್ರ ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿ ಹುದ್ದೆಗಳಿಗೆ 18 ಜನವರಿ 2023ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. 17 ಫೆಬ್ರವರಿ 2023 ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವಾಗಿದೆ.

ಆನ್‌ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ನೇಮಕದ ಕುರಿತ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಎಸ್‌ಎಸ್‌ಸಿ ಸಹಾಯವಾಣಿ ಸಂಖ್ಯೆ: 080-25502520, 09483862020

ಇದನ್ನೂ ಓದಿ: ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

 

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now

Related Posts

error: Content is protected !!