ಉದ್ಯೋಗ

ಪಿಯುಸಿ ಅಭ್ಯರ್ಥಿಗಳಿಗೆ ಕೇಂದ್ರ ಸರಕಾರದ ಭರ್ಜರಿ ನೌಕರಿ | SSC CGL Recruitment 2022

WhatsApp Group Join Now
Telegram Group Join Now

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಭರ್ಜರಿ ನೌಕರಿ ಅವಕಾಶ ಕಲ್ಪಿಸಿದೆ. ₹19,900  ದಿಂದ ₹92,300  ಸಂಬಳದ 4,500 ಹುದ್ದೆಗಳಿಗೆ ಅರ್ಜಿ ಆಹ್ವಾಸಿದೆ. ವಯೋಮಿತಿ, ಅರ್ಜಿ ಶುಲ್ಕ, ವೇತನಶ್ರೇಣಿ, ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆಯ ಲಿಂಕ್ ಇತ್ಯಾದಿ ಮಾಹಿತಿ ಇಲ್ಲಿದೆ…

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (SSC) ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಒಟ್ಟು 4,500 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ. ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಎಚ್‌ಎಸ್‌ಎಲ್) (10+2) ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಗಳಲ್ಲಿ ಪರೀಕ್ಷೆ ಬರೆದು ಈ ಸದಾವಕಾಶ ಬಳಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಕೇವಲ ₹6,000ಕ್ಕೆ ₹60,000 ಬೆಲೆಯ ಹಸು, ಎಮ್ಮೆ, ಕುರಿ-ಮೇಕೆ ಖರೀದಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ

ಒಟ್ಟು 4,500 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ ಹೊರಡಿಸಿರುವ ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಈ ಹುದ್ದೆಗಳ ಸಂಖ್ಯೆಯ ಹೆಚ್ಚಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.

Combined Higher Secondary (10+2) Level Examination- 2022 ಪರೀಕ್ಷೆ ಮೂಲಕ ಕೇಂದ್ರದ ವಿವಿಧ ಇಲಾಖೆ, ಸಚಿವಾಲಯಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ಲೋವರ್ ಡಿವಿಷನ್ ಕ್ಲರ್ಕ್, ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು; ಅರ್ಜಿ ಸಲ್ಲಿಸಲು  ಜನವರಿ 01, 2023 ಕೊನೆಯ ದಿನವಾಗಿರುತ್ತದೆ. ಜನವರಿ 05, 2023ರ ಒಳಗೆ ಅರ್ಜಿ ಶುಲ್ಕ ಪಾವತಿಸಲು ಅವಕಾಶವಿದೆ.

ಇದನ್ನೂ ಓದಿ: ದಿನಕ್ಕೆ 300 ರೂಪಾಯಿ ಭತ್ಯೆ ಸಹಿತ ಉಚಿತ ಮೀನುಗಾರಿಕೆ ತರಬೇತಿ

ವೇತನ ಶ್ರೇಣಿ

  1. ಲೋವರ್ ಡಿವಿಷನ್ ಕ್ಲರ್ಕ್, ಜೂನಿಯರ್ ಸೆಕ್ರೆಟೇರಿಯಟ್ ಅಸಿಸ್ಟೆಂಟ್ ಹುದ್ದೆಗಳಿಗೆ Pay Level-2 ಅನ್ವಯ 19,900 ದಿಂದ 63,200  ರೂಪಾಯಿ
  2. ಡೇಟಾ ಎಂಟ್ರಿ ಆಪರೇಟರ್ (ಡಿಇಒ) ಹುದ್ದೆಗಳಿಗೆ Pay Level-4 ಅನ್ವಯ 25,500 ದಿಂದ 81,100 ರೂಪಾಯಿ ಹಾಗೂ Pay Level-5 ಅನ್ವಯ 29,200 ದಿಂದ 92,300 ರೂಪಾಯಿ
  3. ಡೇಟಾ ಎಂಟ್ರಿ ಆಪರೇಟರ್ ಗ್ರೇಡ್ ಎ ಹುದ್ದೆಗಳಿಗೆ Pay Level-4 ಅನ್ವಯ 25,500 ರಿಂದ 81,100 ರೂಪಾಯಿಗಳು

ವಿದ್ಯಾರ್ಹತೆ: ಮೊದಲೇ ಹೇಳಿದಂತೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 04, 2023 ಕ್ಕೂ ಮುನ್ನ ಪಿಯುಸಿ ಪಾಸಾಗಿರುವುದಕ್ಕೆ ದಾಖಲೆ ಸಲ್ಲಿಸಬೇಕು.

ವಯೋಮಿತಿ: ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಜನವರಿ 02, 1995ರ ನಂತರ ಜನವರಿ 01, 2004ಕ್ಕಿಂತ ಮೊದಲು ಜನಿಸಿರಬೇಕು.ಅ೦ದರೆ 18ರಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 05 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಇದೆ.

ಇದನ್ನೂ ಓದಿ: ಡಿಸೆಂಬರ್ 8ರಿಂದ 10ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಎಲ್ಲ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಮಹಿಳಾ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ನಿಗದಿತ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿದೆ.

ನೇಮಕ ಹೇಗೆ?

Tier-1, Tier-2 ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಮೊದಲ ಶ್ರೇಣಿ (Tier-1) ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಎರಡನೇ ಶ್ರೇಣಿ (Tier-2) ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಎರಡನೇ ಹಂತದ ಪರೀಕ್ಷೆಯ ಎಲ್ಲ ವಿಭಾಗಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸ್ಕಿಲ್ ಟೆಸ್ಟ್ ನಡೆಸಲಾಗುತ್ತದೆ. ನಂತರ ದಾಖಲೆ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಪರೀಕ್ಷೆಗಳು ಹೇಗಿರುತ್ತವೆ? ಯಾವೆಲ್ಲಾ ವಿಷಯಗಳನ್ನು ಒಳಗೊಂಡಿರುತ್ತದೆ ಎಂಬ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ. ಮೊದಲ ಹಂತದ (Tier-1) ಕಂಪ್ಯೂಟರ್ ಆಧಾರಿತ ಪರೀಕ್ಷೆ 2023ರ ಫೆಬ್ರವರಿ-ಮಾರ್ಚ್ ವೇಳೆಯಲ್ಲಿ ನಡೆಯಲಿವೆ. ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಹಾಗೂ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಎಸ್‌ಎಸ್‌ಸಿ ಸಹಾಯವಾಣಿ ಸಂಖ್ಯೆ: 080-25502520, 09483862020

ಗಮನಿಸಿ: ಉದ್ಯೋಗ ನೀಡುವ ಸುಳ್ಳು ಭರವಸೆ, ನಕಲಿ ವೆಬ್‌ಸೈಟ್/ ಅಧಿಸೂಚನೆ(ಪ್ರಕಟಣೆ)ಗಳಿಂದ ಎಚ್ಚರವಾಗಿರಿ. ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಿ. ಬಹುಮುಖ್ಯವಾಗಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ವಿವರವಾಗಿ ಓದಿ ಈ ಹುದ್ದೆಗಳಿಗೆ ನೀವು ಅರ್ಹರೆ? ಎಂಬುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ ಮತ್ತು ಕೂಡಲೇ ಅರ್ಜಿ ಸಲ್ಲಿಸಿ.

========================

ಇವುಗಳನ್ನೂ ಓದಿ:

ಕೇವಲ ₹6,000ಕ್ಕೆ ₹60,000 ಬೆಲೆಯ ಹಸು, ಎಮ್ಮೆ, ಕುರಿ-ಮೇಕೆ ಖರೀದಿಗೆ ಅರ್ಜಿ ಆಹ್ವಾನ

ದಿನಕ್ಕೆ 300 ರೂಪಾಯಿ ಭತ್ಯೆ ಸಹಿತ ಉಚಿತ ಮೀನುಗಾರಿಕೆ ತರಬೇತಿ

ಮಣ್ಣಿನ ಆರೋಗ್ಯ ತಪಾಸಣೆ: ರೈತರಿಗೆ ಸಿಗಲಿದೆ ಅಧಿಕ ಆದಾಯ

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ರೈತರಿಗೆ ₹24,000 ಕೋಟಿ ಶೂನ್ಯ ಬಡ್ಡಿ ಸಾಲ: ಮುಖ್ಯಮಂತ್ರಿ ಘೋಷಣೆ 

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೆಎಂಎಫ್‌ನಿಂದ ಬಂಪರ್ ಬೆಲೆಗೆ ಮೆಕ್ಕೆಜೋಳ ಖರೀದಿ: ರೈತರೇ ಈ ಅವಕಾಶ ಬಳಸಿಕೊಳ್ಳಿ

ನರೇಗಾ ಯೋಜನೆಯಲ್ಲಿ ರೈತರಿಗೆ ₹2.5 ಲಕ್ಷ ಸಹಾಯಧನ 

ಶೀಘ್ರದಲ್ಲಿಯೇ ಎಲ್ಲ ರೈತರಿಗೂ ಬೆಳೆವಿಮೆ ಪರಿಹಾರ: ನಿಮಗೆ ಎಷ್ಟು ಬೆಳೆವಿಮೆ ಬರಲಿದೆ ಚೆಕ್ ಮಾಡಿಕೊಳ್ಳಿ 

ಬೆಳೆಹಾನಿ ಪರಿಹಾರಕ್ಕೆ ರೈತರಿಗೆ ಆಧಾರವಾದ ಬೆಳೆ ಸಮೀಕ್ಷೆ 

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ 

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಕೂಡಲೇ ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!