ಉದ್ಯೋಗ

SSLC, PUC, ಪದವೀಧರರಿಂದ ಕೇಂದ್ರ ಸರ್ಕಾರದ 5,369 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಸಿ | SSC Recruitment 2023

WhatsApp Group Join Now
Telegram Group Join Now

ಕೇಂದ್ರ ಸರಕಾರದ ವಿವಿಧ ಸಚಿವಾಲಯ, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 5,369 ಹುದ್ದೆಗಳ ನೇಮಕಕ್ಕೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ಅರ್ಜಿ ಸಲ್ಲಿಕೆ ವಿಧಾನ, ಪರೀಕ್ಷಾ ಕೇಂದ್ರಗಳ ಕುರಿತ  ಸಮಗ್ರ ಮಾಹಿತಿ ಇಲ್ಲಿದೆ…

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (Staff Selection Commission-SSC) ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಹಾಗೂ ಪದವೀಧರ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗವಕಾಶ ಕಲ್ಪಿಸಿದೆ. ಕೇಂದ್ರ ಸರಕಾರದ ವಿವಿಧ ಸಚಿವಾಲಯ, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಗುಂಪಿನ ಒಟ್ಟು 5,369 ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಸರಕಾರಿ ಉದ್ಯೋಗದ ಆಕಾಂಕ್ಷೆಯುಳ್ಳ ಅರ್ಹ ಅಭ್ಯರ್ಥಿಗಳು ಇದೇ ಮಾರ್ಚ್ 27ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತದಾದ್ಯಂತ ಕೇಂದ್ರ ಸರಕಾರದ ವಿವಿಧ ಇಲಾಖೆಗಳಿಗೆ ಪೋಸ್ಟ್ ಮಾಡಲಾಗುವುದು.

ಗ್ರಾಮ ಪಂಚಾಯತಿ 6,406 ಹುದ್ದೆಗಳಿಗೆ ಪಿಯುಸಿ ಅಭ್ಯರ್ಥಿಗಳ ನೇಮಕಾತಿ

ಹುದ್ದೆಗಳ ವಿವರ:

ಕೇಂದ್ರ ಸರಕಾರದ ವಿವಿಧ ಸಚಿವಾಲಯ, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಗುಂಪಿನ ಒಟ್ಟು 5,369 ಹುದ್ದೆಗಳಿಗೆ ಈ ನೇಮಕ ನಡೆಯಲಿದೆ. ಮಲ್ಟಿಟಾಸ್ಕಿಂಗ್ ಸ್ಟಾಫ್, ಟೆಕ್ನಿಕಲ್ ಸೂಪರಿಂಟೆ೦ಡೆಟ್, ಅಕೌಂಟೆಟ್, ಕ್ಲರ್ಕ್, ಮೆಕ್ಯಾನಿಕಲ್ ವಿಭಾಗ ಚಾರ್ಜ್ಮನ್, ಕೋರ್ಟ್ ಮಾಸ್ಟರ್, ಕೇರ್ ಟೇಕರ್, ರೀಸರ್ಚ್ ಅಸೋಸಿಯೇಟ್, ಜೂನಿಯರ್ ಕೆಮಿಸ್ಟ್, ಜೂನಿಯರ್ ಎಂಜಿನಿಯರ್, ನರ್ಸಿಂಗ್ ಆಫೀಸರ್, ಸ್ಟಾಕ್‌ಮೆನ್, ಫೀಲ್ಡ್ ಮೆನ್, ಸೀನಿಯರ್ ಕನ್ಸರ್‌ವೇಷನ್ ಅಸಿಸ್ಟೆಂಟ್ ಹೀಗೆ ವೈವಿಧ್ಯಮಯ ಹುದ್ದೆಗಳಿಗೆ ಈ ಪರೀಕ್ಷೆ ಮೂಲಕ ನೇಮಕ ನಡೆಯುತ್ತದೆ.

ರಾಜ್ಯದ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಸೇರಿ ಒಟ್ಟು ಎಂಟು ಜಿಲ್ಲಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತದೆ. ನೇಮಕ ನಡೆಯಲಿರುವ ಹುದ್ದೆಗಳ ವಲಯವಾರು ವಿವರವನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ: ವಯೋಮಿತಿ ಹುದ್ದೆವಾರು ನಿಗಧಿಪಡಿಸಲಾಗಿದ್ದು; ಜನವರಿ 01, 2023ಕ್ಕೆ ಕೆಲವು ಹುದ್ದೆಗಳಿಗೆ ಕನಿಷ್ಟ ವಯೋಮಿತಿ 18 ಮತ್ತು ಗರಿಷ್ಟ 25 ವರ್ಷ ಮೀರರಬಾರದು. ಇನ್ನು ಕೆಲವು ಹುದ್ದೆಗಳಿಗೆ ಕನಿಷ್ಟ 18, ಗರಿಷ್ಟ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 05 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: ರೈತರಿಗೆ 5 ಲಕ್ಷ ರೂಪಾಯಿ ಶೂನ್ಯ ಬಡ್ಡಿ ಸಾಲ ಏಪ್ರಿಲ್ 1ರಿಂದ ಜಾರಿ: ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಮಹಿಳಾ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು. ಆನ್‌ಲೈನ್‌ನಲ್ಲಿ ಸಾಧ್ಯವಾಗದೇ ಇರುವವರು ಎಸ್‌ಬಿಐ ಬ್ಯಾಂಕ್‌ನಲ್ಲಿ ಚಲನ್ ಮೂಲಕ ಪಾವತಿಸಲು ಅವಕಾಶ ನೀಡಲಾಗಿದೆ.

ಪರೀಕ್ಷೆಗಳು ಹೇಗಿರುತ್ತವೆ?

ಮೊದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ನೂರು ಅಂಕಗಳಿಗೆ ನಡೆಯಲಿರುವ ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ, ಅಗತ್ಯ ಇದ್ದರೆ ಕೌಶಲ/ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ. ಅಗತ್ಯವಿಲ್ಲದ ಹುದ್ದೆಗಳಿಗೆ ನೇರವಾಗಿ ದಾಖಲೆ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಇದೇ 2023ರ ಜೂನ್-ಜುಲೈನಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ.

ವಿದ್ಯಾರ್ಹತೆಗೆ ತಕ್ಕಂತೆ ಪರೀಕ್ಷೆಯಲ್ಲಿ ಪ್ರಶ್ನೆ ಕೇಳಲಾಗುತ್ತದೆ. ಅಂದರೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಬಯಸಿದ ಅಭ್ಯರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮಟ್ಟದ ಪ್ರಶ್ನೆ, ಪಿಯುಸಿ ಮತ್ತು ಪದವೀಧರರಿಗೆ ಅವರ ವಿದ್ಯಾರ್ಹತೆ ಮಟ್ಟಕ್ಕೆ ಅನುಗುಣವಾಗಿ ಪ್ರಶ್ನೆಗಳನ್ನು ನೀಡಲಾಗುತ್ತದೆ. ಪರೀಕ್ಷೆಗಳು ಹೇಗಿರುತ್ತವೆ? ಯಾವೆಲ್ಲಾ ವಿಷಯಗಳನ್ನು ಒಳಗೊಂಡಿರುತ್ತದೆ? ಎಂಬ ಮಾಹಿತಿಯ ಜೊತೆಗೆ ಪರೀಕ್ಷೆಯ ಪಠ್ಯಕ್ರಮವನ್ನು ಕೂಡ ಅಧಿಸೂಚನೆಯಲ್ಲಿ ನೀಡಲಾಗಿದೆ; ಸಮಗ್ರವಾಗಿ ಓದಿಕೊಳ್ಳಿ.

ಇದನ್ನೂ ಓದಿ: 2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ಅರ್ಜಿ ಸಲ್ಲಿಕೆ ದಿನಾಂಕ: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ವಿವಿಧ ಹುದ್ದೆಗಳ ನೇಮಕಕ್ಕೆ ಇದೇ ಮಾರ್ಚ್ 6, 2023ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಮಾರ್ಚ್ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ವಿವಿಧ ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗೆ ಸ್ಟಾಫ್ ಸೆಲೆಕ್ಷನ್ ಕಮೀಷನ್ (ಎಸ್‌ಎಸ್‌ಸಿ) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಎಸ್‌ಎಸ್‌ಸಿ ಸಹಾಯವಾಣಿ ಸಂಖ್ಯೆ: 080-25502520, 09483862020 ಕರೆ ಮಾಡಿ ನೇಮಕ ಕುರಿತ ಮಾಹಿತಿ ಪಡೆಯಬಹುದು.

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ

ಒಂದು ಲಕ್ಷ ಸರಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ಶುರು: ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

Agriculture Budget 2023: ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!