ಉದ್ಯೋಗ

ರಾಜ್ಯ ಸರ್ಕಾರಿ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಭಿಯಾನ ಶುರು | State Govt Recruitment 2023

WhatsApp Group Join Now
Telegram Group Join Now

ರಾಜ್ಯ ಸರಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸದ್ದಿಲ್ಲದೇ ನೇಮಕಾತಿ ಅಭಿಯಾನ ಶುರು ಮಾಡಿದೆ. ಈ ನೇಮಕಾತಿಯಲ್ಲಿ SSLCಯಿಂದ ಮೊದಲುಗೊಂಡು ಎಲ್ಲ ಹಂತದ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೂ ಅವಕಾಶ ಸಿಗಲಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಹಲವು ಇಲಾಖೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಸರಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸದ್ದಿಲ್ಲದೇ ನೇಮಕಾತಿ ಅಭಿಯಾನ ಶುರು ಮಾಡಿದೆ. ಸರಕಾರ ಚುನಾವಣೆ ಹೊಸ್ತಿಲಿನಲ್ಲಿ ಸರಕಾರಿ ಹುದ್ದೆ ಭರ್ತಿಗೆ ಬೃಹತ್ ನೇಮಕಾತಿ ಅಭಿಯಾನ ಕೈಗೊಂಡಿದ್ದು, ಇದೇ ಮಾರ್ಚ್ ಹೊತ್ತಿಗೆ ಲಕ್ಷಾಂತರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ತರಾತುರಿಯಲ್ಲಿದೆ. ಈ ನೇಮಕಾತಿಯಲ್ಲಿ SSLC ವಿದ್ಯಾರ್ಹತೆಯಿಂದ ಮೊದಲು ಗೊಂಡು ಎಲ್ಲ ಹಂತದ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೂ ಅವಕಾಶ ಸಿಗಲಿದೆ.

ಪ್ರಸ್ತುತ ರಾಜ್ಯ ಸರಕಾರಿ ವಿವಿಧ ಇಲಾಖೆಗಳಲ್ಲಿ ಎ ಯಿಂದ ಡಿ ವೃಂದದ ವರೆಗೆ ಮಂಜೂರಾಗಿರುವ 7,69,981  ಹುದ್ದೆಗಳಲ್ಲಿ 5,11,272  ಭರ್ತಿಯಾಗಿದ್ದು; 2,58,709 ಹುದ್ದೆಗಳು ಖಾಲಿಯಿವೆ. ಖಾಲಿಯಿರುವ 2.58 ಲಕ್ಷ ಹುದ್ದೆಗಳ ಪೈಕಿ ಒಂದು ಲಕ್ಷ ಹುದ್ದೆಗಳನ್ನು ಈ ಒಂದು ವರ್ಷದೊಳಗೆ ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈಗಾಗಲೇ ಹಲವು ಇಲಾಖೆಗಳು ನೇಮಕ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಸದ್ಯದಲ್ಲೇ ಒಂದು ಲಕ್ಷ ರಾಜ್ಯ ಸರಕಾರಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ನೇಮಕ ನಡೆಯಲಿರುವ ಇಲಾಖೆಗಳು

-ಕೃಷಿ, ಪಶುಸಂಗೋಪನ, ಹಿಂದುಳಿದ ವರ್ಗಗಳ ಕಲ್ಯಾಣ, ಸಹಕಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಇ-ಆಡಳಿತ, ಪರಿಸರ ಮತ್ತು ಜೀವಿಶಾಸ್ತ್ರ, ಇಂಧನ, ಆರ್ಥಿಕ, ಮೀನುಗಾರಿಕೆ, ಆಹಾರ ಮತ್ತು ನಾಗರೀಕ ಸರಬರಾಜು, ಅರಣ್ಯ, ಕೈಮಗ್ಗ ಮತ್ತು ಜವಳಿ, ಉನ್ನತ ಶಿಕ್ಷಣ, ಒಳಾಡಳಿತ, ತೋಟಗಾರಿಕೆ, ವಾರ್ತಾ ಇಲಾಖೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಾರ್ಮಿಕ, ಕಾನೂನು, ಭಾರಿ ಮತ್ತು ಮಧ್ಯಮ ಕೈಗಾರಿಕೆ, ಬಾರಿ ನೀರಾವರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಸಣ್ಣ ನೀರಾವರಿ, ಅಲ್ಪಸಂಖ್ಯಾತರ ಕಲ್ಯಾಣ,

-ಸಂಸಂದೀಯ ವ್ಯವಹಾರಗಳು, ಯೋಜನೆ-ಸಾಂಖ್ಯಿಕ- ವಿಜ್ಞಾನ ಮತ್ತು ತಂತ್ರಜ್ಞಾನ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ, ಲೋಕೋಪಯೋಗಿ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪರಿಶಿಷ್ಟ ಜಾತಿಗಳ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ರೇಷ್ಮೆ ಇಲಾಖೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಣ್ಣ ಕೈಗಾರಿಕೆ, ಪ್ರವಾಸೋದ್ಯಮ, ಸಾರಿಗೆ ಇಲಾಖೆ, ನಗರಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಯುವಜನ ಸೇವೆಗಳು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ.

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ರಸಗೊಬ್ಬರ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಇಲಾಖೆಗಳಿಂದ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KKSRTC) 2,000 ಚಾಲಕರ ಹುದ್ದೆಗಳಿಗೆ ಅರ್ಜಿಗಳ ಆಹ್ವಾನಿಸಿದೆ. ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) 1,492 ಎಂಜಿನಿಯರ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಲೋಕೋಪಯೋಗಿ ಇಲಾಖೆಯಲ್ಲಿ (PWD) 330 ಎಂಜಿನಿಯರ್‌ಗಳಳ ಹುದ್ದೆಗಳು ಖಾಲಿ ಇವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಲೆಕ್ಕಾಕಾರಿ ವಿಭಾಗದಲ್ಲಿ 6,406 ಹುದ್ದೆಗಳು ಖಾಲಿಯಿದೆ. ಕರ್ನಾಟಕ ಅಬಕಾರಿ ಇಲಾಖೆಯು 1,000 ಕಾನ್‌ಸ್ಟೆಬಲ್‌ಗಳು ಮತ್ತು 100 ಸಬ್‌ಇನ್‌ಸ್ಪೆಕ್ಟರ್‌ಗಳ ಹುದ್ದೆಗಳಿಗೆ ಅರ್ಜಿಗೆ ಆಹ್ವಾನಿಸಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 3,484 ಪೊಲೀಸ್ ಪೇದೆಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳ ಕರೆದಿದೆ.

ಇದನ್ನೂ ಓದಿ: SSLC ಪಾಸಾದವರಿಂದ ರೈಲ್ವೇ ಇಲಾಖೆಯ 4,103 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಾರ್ಚ್ ಹೊತ್ತಿಗೆ 50,000 ನೇಮಕ

2023ರ ಜನವರಿ/ ಫೆಬ್ರವರಿ ವೇಳೆಗೆ ನೇಮಕಾತಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಒಂದು ತಿಂಗಳ ಹಿಂದೆಯೇ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ರಾಜ್ಯ ಸರ್ಕಾರಿ ಮೂಲಗಳು ಹೇಳುತ್ತಿವೆ. ಬಹುತೇಕ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ತೀವ್ರವಾಗಿದೆ. ಕೊರೋನಾ ಸಾಂಕ್ರಾಮಿಕ ರೋಗಬಾಧೆಯೂ ಸೇರಿದಂತೆ ವಿವಿಧ ಕಾರಣಗಳಿಗಾಗಿ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಲು ಸಾಧ್ಯವಾಗಿರಲಿಲ್ಲ. ಈಗ ಮಾರ್ಚ್ 2023ರ ಅಂತ್ಯದ ವೇಳೆಗೆ ಕನಿಷ್ಠ 50,000 ಜನರನ್ನು ನೇಮಿಸಿಕೊಳ್ಳುವ ನಿರೀಕ್ಷೆಗಳಿವೆ.

ನ್ಯಾಯಾಲಯದ ಪ್ರಕರಣಗಳ ಅಡಚಣೆ 

ಸಿಬ್ಬಂದಿ ಕೊರತೆಯಿಂದ ಪ್ರಸ್ತುತ ಕೆಲಸ ಮಾಡುತ್ತಿರುವ ನೌಕರರಿಗೆ ಕೆಲಸದ ಹೊರೆ ಹೆಚ್ಚಾಗಿದೆ. ಆದರೆ ನ್ಯಾಯಾಲಯದ ಪ್ರಕರಣಗಳು ಸಿಬ್ಬಂದಿಗಳ ನೇಮಕಾತಿ ಮಾಡಿಕೊಳ್ಳಲು ಸರ್ಕಾರಕ್ಕೆ ಇರುವ ಪ್ರಮುಖ ಅಡಚಣೆಯಾಗಿದೆ. ಕಾನೂನು ತೊಡಕುಗಳಿಂದಾಗಿ 45,000 ಹುದ್ದೆಗಳು ಖಾಲಿ ಉಳಿದಿವೆ. ಶಿಕ್ಷಣ ಇಲಾಖೆಯು 15,000 ಅಭ್ಯರ್ಥಿಗಳನ್ನು ಅಂತಿಮಗೊಳಿಸಿರುವ ಶಿಕ್ಷಕರ ನೇಮಕಾತಿಯನ್ನು ಇದು ಒಳಗೊಂಡಿದೆ. ಸರಕಾರ ಮಧ್ಯಪ್ರವೇಶಿಸಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಏತನ್ಮಧ್ಯೆ, ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲು ಸರ್ಕಾರವು ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದಲ್ಲಿ ಏಳನೇ ವೇತನ ಆಯೋಗವನ್ನು ರಚಿಸಿದ್ದು, ಮುಂದಿನ ವರ್ಷದ ಆರಂಭದಲ್ಲಿ ರಾಜ್ಯ ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ ಈ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆಗಳಿವೆ.

ಇದನ್ನೂ ಓದಿ: ಕೇಂದ್ರ ಸರಕಾರದ 10 ಲಕ್ಷ ಹುದ್ದೆಗಳ ನೇಮಕ | SSC ವಿವಿಧ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಇಲ್ಲಿದೆ

 

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now

Related Posts

error: Content is protected !!