ಸರಕಾರಿ ಯೋಜನೆ

Crop Loss Compensation: ಈ ರೈತರಿಗೆ 74 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ

WhatsApp Group Join Now
Telegram Group Join Now

ಬಿಜೆಪಿ ಸರಕಾರದ ಅವಧಿಯಲ್ಲಿ ಘೋಷಣೆಯಾಗಿ, ಚುನಾವಣೆ ಮತ್ತಿತರ ಕಾರಣದಿಂದ ಸ್ಥಗಿತಗೊಂಡಿದ್ದ ಬೆಳೆಹಾನಿ ಪರಿಹಾರವನ್ನು ಹಾಲಿ ಕಾಂಗ್ರೆಸ್ ಸರಕಾರ ಬಿಡುಗಡೆಗೊಳಿಸುವ ಮೂಲಕ ರೈತರ ನೋವಿಗೆ ಸ್ಪಂದಿಸಿದೆ…

2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೆಟೆ ರೋಗದಿಂದ ಹಾನಿಯಾದ ಮೊದಲ ಹಂತದ ಪರಿಹಾರವಾಗಿ 74 ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ನಿನ್ನೆ (ಜೂನ್ 09) ಪ್ರಕಟಿಸಿದ್ದಾರೆ.

Pashu Sanjeevini Ambulance : ಜೂನ್ 15ರ ನಂತರ ರೈತರ ಮನೆ ಬಾಗಿಲಿಗೇ ಬರಲಿದೆ ಸಂಚಾರಿ ಪಶು ಕ್ಲಿನಿಕ್… 

ಯಾವ್ಯಾವ ಜಿಲ್ಲೆ ರೈತರಿಗೆ ಪರಿಹಾರ?

ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಯ ರೈತರ ಬ್ಯಾಂಕ್ ಖಾತೆಗೆ ಈ ಬೆಳೆಹಾನಿ ಪರಿಹಾರದ ಹಣ ನೇರವಾಗಿ ಜಮೆಯಾಗಲಿದೆ. ಏಕೆಂದರೆ 2022-23ನೇ ಸಾಲಿನಲ್ಲಿ ನೆಟೆ ರೋಗದಿಂದ ಕಲಬುರಗಿ ಜಿಲ್ಲೆಯಲ್ಲಿ 1,98,488 ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ 14,495 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 10,259 ಹೆಕ್ಟೇರ್, ವಿಜಯಪುರ ಜಿಲ್ಲೆಯಲ್ಲಿ 20,401 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿತ್ತು.

Monsoon Rain: ರಾಜ್ಯದಲ್ಲಿ ಜೂನ್ 11ರಿಂದ ಮುಂಗಾರು ಮಳೆ: ಮೊಬೈಲ್‌ನಲ್ಲೇ ಪಡೆಯಿರಿ ನಿಮ್ಮೂರಿನ ಮಳೆ ಮಾಹಿತಿ

ನೆಟೆರೋಗದ ತೀವ್ರತೆ ಹಾಗೂ ನಷ್ಟಕ್ಕೆ ಹೆದರಿದ ಅನೇಕ ರೈತರು ಸಾಲುಸಾಲಾಗಿ ಆತ್ಮಜತ್ಯೆ ಮಾಡಿಕೊಂಡಿದ್ದರು. ಇಡೀ ಕಲ್ಯಾಣ ಕರ್ನಾಟಕ ರೈತರ ಮರಣ ಸೀಮೆಯಾಗಿ ಪರಿಣಮಿಸಿತ್ತು. ನಷ್ಟಕ್ಕೊಳಗಾದ ರೈತ ಸಂಘಟನೆಗಳು ಕಲಬುರಗಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಿದ್ದವು. ಈ ವಿಷಯ ಶಾಸಕ ಪ್ರಿಯಾಂಕ್ ಖರ್ಗೆ ಗಮನಕ್ಕೆ ಬಂದು, ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಬಿಜೆಪಿ ಸರಕಾರದ ಗಮನ ಸೆಳೆದಿದ್ದರು.

ಸ್ವಯಂ ಉದ್ಯೋಗ ಮಾಡಲು ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಹೋರಾಟ ತೀವ್ರವಾಗುತ್ತಿದ್ದಂತೆಯೇ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರದಂತೆ ಗರಿಷ್ಠ ಎರಡು ಹೆಕ್ಟೇರ್‌ಗೆ ಸೀಮಿತಗೊಳಿಸಿ ಪರಿಹಾರ ಘೋಷಿಸಿದ್ದರು. ಆದರೆ, ಅವರು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಯುವ ತನಕ ಪರಿಹಾರದ ಹಣ ಬಿಡುಗಡೆ ಮಾಡಲೇ ಇಲ್ಲ.

ಈ ಮಧ್ಯೆ ವಿಧಾನಸಭೆ ಚುನಾವಣೆ ಘೋಷಣೆಯಾಗಿ ನೆಟೆ ರೋಗ ಪರಿಹಾರ ರೈತರ ಕನಸು ಕಮರಿ ಹೋಗಿತ್ತು. ಕಾಂಗ್ರೆಸ್ ಸರಕಾರಕ್ಕೆ ಅಧಿಕಾರಕ್ಕೆ ಬಂದ ಬಳಿಕ ಕಲಬುರಗಿ ಜಿಲ್ಲೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಡಾ. ಶರಣಪ್ರಕಾಶ ಪಾಟೀಲ್ ಅವರು ಸ್ಥಗಿತಗೊಂಡಿದ್ದ ನೆಟೆರೋಗ ಪರಿಹಾರ ನೀಡುವಂತೆ ಕೃಷಿ ಸಚಿವರ ಗಮನಕ್ಕೆ ತಂದಿದ್ದಾರೆ.

ಹೊಸ APL, BPL ರೇಷನ್ ಕಾರ್ಡ್ ಪಡೆಯಲು ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

ತತ್ಪರಿಣಾಮ ನಿನ್ನೇ ಜೂನ್ 09ನೇ ತಾರೀಖು ಕೃಷಿ ಸಚಿವ ಚಲುವರಾಯಸ್ವಾಮಿ ಮೊದಲ ಹಂತದ ಪರಿಹಾರ 74 ಕೋಟಿ ರೂಪಾಯಿ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಉಳಿದ ಪರಿಹಾರ ಮೊತ್ತವನ್ನು ಕೂಡ ಶೀಘ್ರದಲ್ಲೇ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ಸದ್ಯ ಈಗ ಘೋಷಣೆಯಾದ ಹಣ ರೈತರ ಬ್ಯಾಂಕ್ ಖಾತೆ ಸೇರಬೇಕಾಗಿದೆ.

ಇದನ್ನೂ ಓದಿ:

ರೈತರು ಮತ್ತು ರೈತ ಮಹಿಳೆಯರಿಂದ ಉಚಿತ ಹೈನುಗಾರಿಕೆ, ಕುರಿ-ಮೇಕೆ ಸಾಕಣೆ ತರಬೇತಿಗೆ ಅರ್ಜಿ ಆಹ್ವಾನ

ಹೈನು ರೈತರ ಚಿತ್ತ ಗಮನ ಖಾಸಗಿ ಹಾಲಿನ ಡೈರಿಗಳತ್ತ: ಕೆಎಂಎಫ್‌ನ ಕನಿಷ್ಠ ಬೆಲೆ, ಗರಿಷ್ಠ ಕ್ವಾಲಿಟಿ ಟಾರ್ಗೆಟ್‌ಗೆ ಬೆಚ್ಚಿದ ರೈತರು

ಹೊಸ ರೇಷನ್ ಕಾರ್ಡ್ ವಿತರಣೆಗೆ ಆನ್‌ಲೈನ್ ಅರ್ಜಿ ಆಹ್ವಾನ | ಬಿಪಿಎಲ್ ಕಾರ್ಡ್ ಪಡೆಯಲು ಯಾರೆಲ್ಲ ಅರ್ಹರು?

ರೈತರ ಖಾತೆಗೆ ಶೀಘ್ರದಲ್ಲೇ 403 ಕೋಟಿ ರೂಪಾಯಿ ಹಾಲಿನ ಪ್ರೋತ್ಸಾಹಧನ ಹಾಲಿನ ಪ್ರೋತ್ಸಾಹಧನ ಜಮೆ | ನಿಮ್ಮ ಪ್ರೋತ್ಸಾಹಧನ ಸ್ಟೇಟಸ್ ಮೊಬೈಲ್‌ನಲ್ಲೇ ಚೆಕ್ ಮಾಡಿ…

ಹಸುವಿನ ಹಾಲಿನ ಡಿಗ್ರಿ ಹೆಚ್ಚಿಸಲು ಈ ವಿಧಾನ ಅನುಸರಿಸಿ…

ಹಸು, ಎಮ್ಮೆ ಗಂಜಲದಿಂದ ನೀವೆ ತಯಾರಿಸಿಕೊಳ್ಳಿ ಸಾವಯವ ಯೂರಿಯಾ ಗೊಬ್ಬರ

ಹಸು, ಎಮ್ಮೆಗಳ ಹಾಲು ಹೆಚ್ಚಿಸಲು ಒಂದು ಹಿಡಿ ಅಜೋಲ್ಲಾ ಸಾಕು | ಇದು ಹಸು, ಎಮ್ಮೆ, ಕೋಳಿ, ಕುರಿ-ಮೇಕೆಗಳ ಟಾನಿಕ್

 

ಜಾನುವಾರುಗಳ ಮೃಷ್ಟಾನ್ನ ರಸಮೇವು | ಬೇಸಿಗೆಗೆ ಮೇವಿನ ಕೊರತೆ ನೀಗುವ ಸೈಲೇಜ್ ತಯಾರಿಕೆ ಹೇಗೆ?

ಈ ಬೆಳೆಯಿಂದ ಒಂದು ಎಕರೆಯಲ್ಲಿ ತಿಂಗಳಿಗೆ 2 ಲಕ್ಷ ಆದಾಯ | ಸಣ್ಣ ರೈತರ ಬದುಕು ಬಂಗಾರವಾಗಿಸುವ ಬೆಳೆ

 

ನಿರಂತರ ಉಚಿತ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!