ಸರಕಾರಿ ಯೋಜನೆ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ | Togari Neteroga 10,000 Rupee compensation

WhatsApp Group Join Now
Telegram Group Join Now

ಕಡೆಗೂ ತೊಗರಿ ನೆಟೆರೋಗದ ಅನಾಹುತಕ್ಕೆ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ 223 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದೆ.  ರೈತರಿಗೆ ಎಕರೆಗೆ ಎಷ್ಟು ಪರಿಹಾರ ಸಿಗಲಿದೆ? ಅದನ್ನು ಪಡೆಯುವುದು ಹೇಗೆ? ಹಾಳಾದ ಬೆಳೆ ಎಷ್ಟು? ಸಮಗ್ರ ಮಾಹಿತಿ ಇಲ್ಲಿದೆ…

ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ತೊಗರಿ ರೈತರ ಸರಣಿ ಆತ್ಮಹತ್ಯೆ ಹಾಗೂ ನಿರಂತರ ಪ್ರತಿಭಟನೆಯ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ 223 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದೆ. ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಬೆಳೆಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿಗಳಂತೆ ಎನ್‌ಡಿಆರ್‌ಎಫ್/ ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಗರಿಷ್ಟ ಎರಡು ಹೆಕ್ಟೇರ್‌ಗೆ ಸೀಮಿತಗೊಳಿಸಿ ಬಾಧಿತ ರೈತರಿಗೆ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ಜಿಲ್ಲಾ ಪ್ರವಾಸದಿಂದ ಹಿಂತಿರುಗಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಜನವರಿ 28ಕ್ಕೆ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ಅತೀ ಮಳೆ ನಲುಗಿದ ತೊಗರಿ ಬೆಳೆಗಾರ

ತೊಗರಿ ವಾರ್ಷಿಕ ಬೆಳೆಯಾಗಿದ್ದು, ಉತ್ತಮ ಬೆಲೆ ಸಿಕ್ಕರೆ ಕೈತುಂಬ ಹಣ ಬರುತ್ತದೆ. ಹೀಗಾಗಿ ಕಲ್ಯಾಣ ಕರ್ನಾಟಕ ಭಾಗದ ರೈತರು ಪ್ರತಿ ವರ್ಷ ತೊಗರಿಗೆ ಆದ್ಯತೆ ನೀಡುತ್ತಾರೆ. ಆದರೆ ಈ ವರ್ಷ ಅತಿವೃಷ್ಟಿ ಒಂದೆಡೆಯಾದರೆ, ಅತಿಯಾದ ಮಳೆ ನೆಟೆ ರೋಗಕ್ಕೆ ಪ್ರಮುಖ ಕಾರಣವಾಗಿದೆ. ತೊಗರಿ ಕಾಯಿ ಕಟ್ಟೋ ಹಂತದಲ್ಲಿ ನೆಟರೋಗ ಆವರಿಸಿದ್ದರಿಂದ ಬೇರು ಒಣಗಿ, ಹೂವು ಉದುರಿ ಎಲ್ಲವೂ ನಾಶವಾಗಿದೆ. ಶೇ.25ರಿಂದ ಶೇ.60ರಷ್ಟು ಬೆಳೆ ಹಾನಿಯಾಗಿ ನಾಲ್ಕಾರು ಕಾಯಿ ಆದರೂ ಕಾಳು ತುಂಬಿಕೊಂಡಿಲ್ಲ. ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ತೊಗರಿ ಬೆಳೆ ಚೆನ್ನಾಗಿಯೇ ಇತ್ತು. ನಂತರ ಬಂದ ಭಾರಿ ಮಳೆ ಬೆಳೆಗೆ ಮಾರಕವಾಗಿದೆ.

ಔಷಧೋಪಚಾರ ಮಾಡಿದರೂ ರೋಗ ಹತೋಟಿಗೆ ಬಂದಿಲ್ಲ. ತೇವಾಂಶ ಹೆಚ್ಚಾಗಿ ಬೆಳೆ ಬಹುತೇಕ ಒಣಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಸಮೃದ್ಧವಾಗಿ ಬಂದಿದ್ದ ತೊಗರಿ ಒಣಗಿ ನಿಂತಿದ್ದು, ಕಳೆದ ಮೂರು ವರ್ಷ ಅತಿವೃಷ್ಟಿಯಿಂದ ಸಂಕಷ್ಟದಲ್ಲಿ ನರಳುತ್ತಿದ್ದ ಅನ್ನದಾತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರೋಗದ ಹಿನ್ನೆಲೆಯಲ್ಲಿ ಪ್ರಾಥಮಿಕ ಸಮೀಕ್ಷೆ ನಡೆಸಿದ ಕೃಷಿ ಅಧಿಕಾರಿಗಳು, ಹಾನಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ರೈತರಿಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ ಪರಿಹಾರ ಒದಗಿಸಿಕೊಡಲು ವರದಿಯಲ್ಲಿ ತಿಳಿಸಲಾಗಿತ್ತು. ಇದೀಗ ಹಲವು ರೈತರ ಆತ್ಮಕತ್ಯೆಯ ಬಳಿಕ ಎಚ್ಚೆತ್ತುಕೊಂಡ ಸರಕಾರ ಅಂತಿಮ ಪರಿಹಾರ ಘೋಷಿಸಿದೆ.

ಇದನ್ನೂ ಓದಿ: ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ಬೆಳೆಹಾನಿ ಪ್ರಮಾಣವೆಷ್ಟು?

ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ತದನಂತರ ನವೆಂಬರ್ ತಿಂಗಳಿನಲ್ಲಿ ತಲೆದೋರಿದ ಒಣ/ ಶುಷ್ಕ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಸಂಕೀರ್ಣ ನೆಟೆ ರೋಗ ಮೂರೂ ಜಿಲ್ಲೆಗಳಲ್ಲಿ ಉಲ್ಬಣಗೊಂಡು ಬೆಳೆಹಾನಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಸುಮಾರು 1.98 ಲಕ್ಷ ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ ಸುಮಾರು 0.145 ಲಕ್ಷ ಹೆಕ್ಟೇರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸುಮಾರು 0.1028 ಲಕ್ಷ ಹೆಕ್ಟೇರ್ ಸೇರಿ ಒಟ್ಟಾರೆಯಾಗಿ 2.2278 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ತೊಗರಿ ಬೆಳೆ ಸಂಕೀರ್ಣ ನೆಟೆ ರೋಗಕ್ಕೆ ಹಾನಿಯಾಗಿರುವುದು ವರದಿಯಾಗಿರುತ್ತದೆ. ಹಾನಿಗೊಳಗಾದ ರೈತರ ನೆರೆವಿಗೆ ಧಾವಿಸಿದ ಸರ್ಕಾರವು ವಿಶೇಷ ಪ್ರಕರಣವೆಂದು ರಾಜ್ಯ ಸರ್ಕಾರ ತೀರ್ಮಾನಿಸಿ ಪರಿಹಾರ ಘೋಷಿಸಿದೆ.

25,000 ರೂಪಾಯಿ ಪರಿಹಾರಕ್ಕೆ ಆಗ್ರಹ

ತೊಗರಿ ನೆಟೆರೋಗ ಉಲ್ಬಣದಿಂದಾಗಿ ಹಲವು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಳೆದ ಜನವರಿ 17ಕ್ಕೆ ಕಲಬುರಗಿ ಬಂದ್‌ಗೆ ಕರೆ ನೀಡಲಾಗಿತ್ತು. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಬೆಳೆಗಳು ಹಾನಿಯಾದಾಗ ವಿಶೇಷ ಪ್ಯಾಕೇಜ್ ನೀಡಲಾಗುತ್ತದೆ. ಅಂತೆಯೇ ಈಗ ನೆಟೆ ರೋಗದಿಂದ ಹಾನಿಗೊಳಗಾದ ರಾಜ್ಯದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಬೇಕು. ಜೊತೆಗೆ ಪ್ರತಿ ಎಕರೆಗೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದರು.

ಇದನ್ನೂ ಓದಿ: ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ಈ ನಡುವೆ ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಅಧಿವೇಶನದಲ್ಲಿ ನೆಟೆ ರೋಗದ ಚರ್ಚೆ ಹೆಸರಿಗೆ ಮಾತ್ರ ನಡೆಯಿತೇ ಹೊರತು ಅಸಲಿ ರೈತರ ಗೋಳು ಅಲ್ಲಿ ಪ್ರಸ್ತಾಪವಾಗಲೇ ಇಲ್ಲವೆಂಬ ಅಸಮಾಧಾನ ರೈತರನ್ನು ಕಾಡುತ್ತಿತ್ತು. ಹೀಗಾಗಿ ಕಳೆದ ಜನವರಿ 17ಕ್ಕೆ ಕಲಬುರಗಿ ಬಂದ್‌ಗೆ ಕರೆ ನೀಡಲಾಗಿದ್ದು; ತೊಗರಿ ರೈತರ ಆಕ್ರೋಶದ ಕಟ್ಟೆ ಒಡೆಯುವ ಮುನ್ನ ಸರಕಾರ ಎಚ್ಚೆತ್ತುಕೊಂಡು ಪರಿಹಾರ ಘೋಷಿಸಿದೆ.

ಇದನ್ನೂ ಓದಿ:

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ | 1.4 ಲಕ್ಷ ವಿದ್ಯಾರ್ಥಿಗಳು ನಿರೀಕ್ಷೆಯಲ್ಲಿ

SSLC ಪಾಸಾದವರಿಂದ HAL ಫೈಯರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ತುಮಕೂರಿನಲ್ಲಿ ಕೆಲಸ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!