ಉದ್ಯೋಗ

2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

WhatsApp Group Join Now
Telegram Group Join Now

ಶೀಘ್ರದಲ್ಲಿಯೇ ಗ್ರಾಮ ಲೆಕ್ಕಿಗರ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು; ಈ ಕುರಿತು ಸರಕಾರ ಅಧಿಕೃತ ಅಧಿಸೂಚನೆ ಹೊರಡಿಸಲಿದೆ. ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸದ್ಯ ರಾಜ್ಯದ 9,837  ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಪೈಕಿ ಖಾಲಿ ಇರುವ 2007 ಹುದ್ದೆಗಳ ತಾಲ್ಲೂಕುವಾರು ಪಟ್ಟಿ ಇಲ್ಲಿದೆ. ಗ್ರಾಮ ಲೆಕ್ಕಿಗ ಹುದ್ದೆ ನೇಮಕಾತಿ ವಿವರ ಇಲ್ಲಿದೆ…

ಈಚೆಗಷ್ಟೇ ಗ್ರಾಮ ಲೆಕ್ಕಿಗ ಅಥವಾ ಗ್ರಾಮ ಲೆಕ್ಕಾಧಿಕಾರಿ ಪದನಾಮವನ್ನು ಗ್ರಾಮ ಅಡಳಿತ ಅಧಿಕಾರಿ ಎಂದು ಬದಲಿಸಿರುವ ಸರಕಾರ ಈ ಹುದ್ದೆಗಳ ಖಾಲಿ ಸ್ಥಾನಗಳ ತಾಲ್ಲೂಕುವಾರು ಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟಾರೆ 9,837 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿದ್ದು, ಇದರಲ್ಲಿ 2007 ಹುದ್ದೆಗಳು ಖಾಲಿ ಇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನಸಭೆಗೆ ತಿಳಿಸಿದ್ದಾರೆ. ಶ್ರವಣಬೆಳಗೊಳದ ಶಾಸಕ ಬಾಲಕೃಷ್ಣ ಸಿ. ಎನ್ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ಕಂದಾಯ ಸಚಿವರು, ಖಾಲಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ

ಇದನ್ನೂ ಓದಿ: ಸದ್ಯದಲ್ಲೇ ಒಂದು ಲಕ್ಷ ರಾಜ್ಯ ಸರಕಾರಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಇದನ್ನೂ ಓದಿ: 10ನೇ ತರಗತಿ, ಡಿಪ್ಲೊಮಾ ಅಭ್ಯರ್ಥಿಗಳಿಂದ ನ್ಯಾಯಾಲಯದ ಹುದ್ದೆಗಳಿಗೆ ಅರ್ಜಿ ಆಹ್ವಾನ | ತಿಂಗಳಿಗೆ 17,00 ದಿಂದ 52,650 ಸಂಬಳ

ಹುದ್ದೆಗೆ ಪದವೀಧರರನ್ನು ನೇಮಕ ಮಾಡಿಕೊಳ್ಳಬೇಕೆಂಬ ಬೇಡಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಆರ್. ಅಶೋಕ್, ಸದ್ಯ ಪಿಯುಸಿ ವಿದ್ಯಾರ್ಹತೆಯನ್ನು ಈ ಹುದ್ದೆಗಳಿಗೆ ನಿಗದಿಪಡಿಸಲಾಗಿದೆ. ಪದವಿಯನ್ನು ಅರ್ಹತೆಯನ್ನಾಗಿ ಪರಿಗಣಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರ ನೇಮಕಾತಿಯನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳೇ ಆಯ್ಕೆ / ನೇಮಕಾತಿ ಪ್ರಾಧಿಕಾರಗಳಾಗಿ ಭರ್ತಿ ಮಾಡುವ ಪ್ರಕ್ರಿಯೆ ಹಿಂದಿನಿಂದಲೂ ಇದೆ. ಕರ್ನಾಟಕ ಜನರಲ್ ಸರ್ವೀಸಸ್ (Revenue Subordinate Branch) (Cadre & Recruitment) (ತಿದ್ದುಪಡಿ) ನಿಯಮಗಳು 2008 ಮತ್ತು 2009 ಹಾಗೂ ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ಪ್ರಕಾರ ಅಭ್ಯರ್ಥಿಗಳು ಅವರು ದ್ವಿತೀಯ ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್‌ಇ ಅಥವಾ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಆದಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುತ್ತಿತ್ತು. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳೇ ಆಯ್ಕೆ / ನೇಮಕಾತಿ ಪ್ರಾಧಿಕಾರವಾಗಿರುತ್ತದೆ.

ಆದರೆ ಇದೀಗ ಸದರಿ ಹುದ್ದೆಗಳನ್ನು ಇನ್ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ನಿರ್ಧಾರದ ಕುರಿತು ಸಲಹೆಗಳು /ಸೂಚನೆಗಳನ್ನು ಕೇಳಲು ಇದೀಗ ಸರ್ಕಾರ ಸಮಿತಿಯೊಂದನ್ನು ರಚಿಸಿದೆ. ಕಳೆದ ಒಂದು ವರ್ಷದಿಂದಲೂ ಈ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂಬ ಉತ್ತರವನ್ನೇ ಸರ್ಕಾರ ನೀಡುತ್ತಾ ಬಂದಿದೆ.

ಶೀಘ್ರದಲ್ಲಿಯೇ ಗ್ರಾಮ ಲೆಕ್ಕಿಗರ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು; ಈ ಕುರಿತು ಸರಕಾರ ಅಧಿಕೃತ ಅಧಿಸೂಚನೆ ಹೊರಡಿಸಲಿದೆ. ಸದ್ಯ ರಾಜ್ಯದ 9,837 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಪೈಕಿ ಖಾಲಿ ಇರುವ 2007 ಹುದ್ದೆಗಳ ತಾಲ್ಲೂಕುವಾರು ಪಟ್ಟಿ ಇಲ್ಲಿದೆ. ಗ್ರಾಮ ಲೆಕ್ಕಿಗ ಖಾಲಿ ಹುದ್ದೆಗಳ ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ…

 

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!