ಉದ್ಯೋಗ

SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ 2,521 ಹುದ್ದೆಗಳಿಗೆ ಅರ್ಜಿ | Western Central Railway Recruitment 2022

WhatsApp Group Join Now
Telegram Group Join Now

ರೈಲ್ವೆ ನೇಮಕಾತಿ ಸೆಲ್, ಪಶ್ಚಿಮ ಮಧ್ಯ ರೈಲ್ವೆ(WCR)ಯಲ್ಲಿ ಒಟ್ಟು 2,521 ಖಾಲಿ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಲಿಂಕ್, ಅಧಿಕೃತ ಅಧಿಸೂಚನೆಗಳ ವಿವರ ಇಲ್ಲಿದೆ…

10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಪಶ್ಚಿಮ ಮಧ್ಯೆ ರೈಲ್ವೆ (WCR) ನೇಮಕಾತಿ ನವೆಂಬರ್ 17, 2022ರಂದು ಅಧಿಸೂಚನೆ ಹೊರಡಿಸಿದ್ದು; ಒಟ್ಟು 2,521 ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು; ಡಿಸೆಂಬರ್ 17, 2022ರೊಳಗೆ ಅರ್ಜಿ ಅಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದಾಗಿದೆ.

ಇದನ್ನೂ ಓದಿ: SSLC, PUC, ಪದವಿ ಅಭ್ಯರ್ಥಿಗಳಿಂದ ಭಾರತೀಯ ಪಶುಪಾಲನಾ ನಿಗಮದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಶ್ಚಿಮ ಮಧ್ಯ ರೈಲ್ವೆ (WCR) ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ. JBP ವಿಭಾಗ,BPL ವಿಭಾಗ, KOTA ವಿಭಾಗ, WRS KOTA, CRWS BPL, ಮತ್ತು HQ BPL ಸೇರಿದಂತೆ ರೈಲ್ವೆಯ ಘಟಕಗಳು/ವರ್ಕ್‌ಶಾಪ್‌ಗಳಲ್ಲಿ ಗೊತ್ತುಪಡಿಸಿದ ಟ್ರೇಡ್‌ಗಳಲ್ಲಿ ಒಟ್ಟು 2,521 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.ಅಭ್ಯರ್ಥಿಗಳು ಕೆಳಕೆ ನೀಡಿರುವ ಲಿಂಕ್ ಮೂಲಕ ಪಶ್ಚಿಮ ಮಧ್ಯೆ ರೈಲ್ವೆ (WCR) ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣ ಓದಿಕೊಂಡು, ಅಧಿಸೂಚನೆಯ ಪ್ರಕಾರ ಎಲ್ಲ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: 

ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಒಟ್ಟಾರೆಯಾಗಿ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ ಪರೀಕ್ಷೆ ಅಥವಾ ಅದಕ್ಕೆ ಸಮಾನವಾದ (10+2 ಪರೀಕ್ಷಾ ವ್ಯವಸ್ಥೆಯ ಅಡಿಯಲ್ಲಿ) ಉತ್ತೀರ್ಣರಾಗಿರಬೇಕು. NCVT/SCVT ನೀಡಿದ ಅಧಿಸೂಚಿತ ವ್ಯಾಪಾರದಲ್ಲಿ ರಾಷ್ಟ್ರೀಯ ವ್ಯಾಪಾರ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಇದನ್ನೂ ಓದಿ: ಕೀಟಪೀಡೆಗೆ ಪರ್ಪೆಕ್ಟ್ ಪರಿಹಾರ ಅಕ್ಕಡಿಸಾಲು

ಅರ್ಜಿ ಸಲ್ಲಿಕೆ ಹೇಗೆ?: ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 17, 2022 ರವರೆಗೆ ವೆಸ್ಟ್ ಸೆಂಟ್ರಲ್ ರೈಲ್ವೆ ಅಧಿಕೃತ ವೆಬ್‌ಸೈಟ್‌ಗೆ (WCT) ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಲಿಂಕ್‌ನಲ್ಲಿರುವ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಿ.

ಅರ್ಜಿ ಶುಲ್ಕ: ಎಲ್ಲಾ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವಿದ್ದು; ಎಸ್‌ಸಿ/ ಎಸ್‌ಟಿ, ವಿಕಲಾಂಗ ವ್ಯಕ್ತಿಗಳು ಹಾಗೂ ಮಹಿಳೆಯರಿಗೆ ಯಾವುದೇ ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್‌ಬ್ಯಾಂಕಿಂಗ್, ಇ-ವ್ಯಾಲೆಟ್ ಮೂಲಕ ಪಾವತಿಸಬಹುದಾಗಿದೆ.

ಇದನ್ನೂ ಓದಿ: ಕೋಳಿ ಸಾಕಣೆಗೆ ₹25 ಲಕ್ಷ, ಕುರಿ-ಮೇಕೆ ತಳಿ ಸಂವರ್ಧನೆಗೆ ₹50 ಲಕ್ಷ ಆರ್ಥಿಕ ನೆರವು

ಅರ್ಜಿ ಸಲ್ಲಿಕೆಯ ದಿನಾಂಕ: ಕಳೆದ ನವೆಂಬರ್ 18, 2022೨ರಿಂದಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಅರ್ಜಿ ಸಲ್ಲಿಸಲು ಡಿಸೆಂಬರ್ 17, 2022 ಕೊನೆಯ ದಿನಾಂಕವಾಗಿದೆ.

ಅಭ್ಯರ್ಥಿಗಳ ವಯೋಮಿತಿ, ನೇಮಕಾತಿ ಪ್ರಕ್ರಿಯೆ, ಜಾತಿ/ ವರ್ಗಗಳಿಗೆ ಅನುಗುಣವಾಗಿ ಮೀಸಲಿರುವ ಹುದ್ದೆಗಳ ಸಂಖ್ಯೆ, ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ. ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಹಾಗೂ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಶ್ಚಿಮ ಮಧ್ಯ ರೈಲ್ವೆ (WCR) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಗಮನಿಸಿ: ಉದ್ಯೋಗ ನೀಡುವ ಸುಳ್ಳು ಭರವಸೆ, ನಕಲಿ ವೆಬ್‌ಸೈಟ್/ ಅಧಿಸೂಚನೆ(ಪ್ರಕಟಣೆ)ಗಳಿಂದ ಎಚ್ಚರವಾಗಿರಿ. ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಿ. ಬಹುಮುಖ್ಯವಾಗಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ವಿವರವಾಗಿ ಓದಿ ಈ ಹುದ್ದೆಗಳಿಗೆ ನೀವು ಅರ್ಹರೆ? ಎಂಬುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ ಮತ್ತು ಕೂಡಲೇ ಅರ್ಜಿ ಸಲ್ಲಿಸಿ.

=========================

ಇವುಗಳನ್ನೂ ಓದಿ:

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ

ಈ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ ₹50,000 ಹಣಕಾಸಿನ ನೆರವು

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 787 ಕಾನ್ಸ್‌ಟೇಬಲ್ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ 50 ಜನ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರೈತರಿಗೆ ₹24,000 ಕೋಟಿ ಶೂನ್ಯ ಬಡ್ಡಿ ಸಾಲ: ಮುಖ್ಯಮಂತ್ರಿ ಘೋಷಣೆ 

ಈ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ ₹50,000 ಹಣಕಾಸಿನ ನೆರವು

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 787 ಕಾನ್ಸ್‌ಟೇಬಲ್ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ 50 ಜನ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೆಎಂಎಫ್‌ನಿಂದ ಬಂಪರ್ ಬೆಲೆಗೆ ಮೆಕ್ಕೆಜೋಳ ಖರೀದಿ: ರೈತರೇ ಈ ಅವಕಾಶ ಬಳಸಿಕೊಳ್ಳಿ

ನರೇಗಾ ಯೋಜನೆಯಲ್ಲಿ ರೈತರಿಗೆ ₹2.5 ಲಕ್ಷ ಸಹಾಯಧನ 

ಶೀಘ್ರದಲ್ಲಿಯೇ ಎಲ್ಲ ರೈತರಿಗೂ ಬೆಳೆವಿಮೆ ಪರಿಹಾರ: ನಿಮಗೆ ಎಷ್ಟು ಬೆಳೆವಿಮೆ ಬರಲಿದೆ ಚೆಕ್ ಮಾಡಿಕೊಳ್ಳಿ 

20 ಕುರಿ, 1 ಮೇಕೆ ಗಿಫ್ಟ್: ಮುಖ್ಯಮಂತ್ರಿ ಘೋಷಣೆ | ಈ ಗಿಫ್ಟ್ ಪಡೆಯಲು ಯಾರೆಲ್ಲ ಅರ್ಹರು?

ಬೆಳೆಹಾನಿ ಪರಿಹಾರಕ್ಕೆ ರೈತರಿಗೆ ಆಧಾರವಾದ ಬೆಳೆ ಸಮೀಕ್ಷೆ 

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ 

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!