Penalty for vehicles without HSRP : ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ (High Security Registration Plates – HSRP) ಅಳವಡಿಕೆಗೆ ರಾಜ್ಯ ಸರ್ಕಾರ ನೀಡಿದ್ದ ಗಡುವು ಇದೇ ಸೆಪ್ಟೆಂಬರ್ 15ಕ್ಕೆ ಮುಕ್ತಾಯಗೊಳ್ಳುತ್ತದೆ. ಸೆಪ್ಟೆಂಬರ್ 16ರಿಂದ ಎಚ್‌ಎಸ್‌ಆರ್‌ಪಿ ಅಳವಡಿಸದ ವಾಹನಗಳಿಗೆ ದಂಡ (Penalty for vehicles) ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.
ಕೇಂದ್ರ ಸರ್ಕಾರದ (Government of India) ನಿರ್ದೇಶನದಂತೆ ಏಪ್ರಿಲ್ 1, 2019ಕ್ಕಿಂತ ಹಿಂದೆ ನೋಂದಣಿಯಾದ೦ತಹ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯವಾಗಿದೆ. ಅದರಂತೆ ರಾಜ್ಯದಲ್ಲಿ 2 ಕೋಟಿ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕಿತ್ತು.
ಕಳೆದ ವರ್ಷದ ನವೆಂಬರ್ ತಿಂಗಳಲ್ಲಿಯೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ರಾಜ್ಯ ಸರ್ಕಾರ ವಾಹನ ಮಾಲೀಕರಿಗೆ ಗಡುವು ನೀಡಿತ್ತು. ಆದರೆ, ವಾಹನ ಮಾಲೀಕರು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಆಸಕ್ತಿ ತೋರದ ಕಾರಣ 2024ರ ಫೆಬ್ರವರಿ ವರೆಗೆ ಗಡುವು ವಿಸ್ತರಿಸಲಾಗಿತ್ತು.
ಆನಂತರವೂ ಎಚ್‌ಎಸ್‌ಆರ್‌ಪಿ ಅಳವಡಿಕೆ ಪ್ರಮಾಣ ಹೆಚ್ಚಾಗಲಿಲ್ಲವಾದ್ದರಿಂದ ಮತ್ತೆ ಜುಲೈಗೆ ಗಡುವು ವಿಸ್ತರಿಸಲಾಗಿತ್ತು. ಬಳಿಕ ನ್ಯಾಯಾಲಯದ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 15ಕ್ಕೆ ಮತ್ತೊಂದು ಬಾರಿ ಗಡುವು ವಿಸ್ತರಿಸಿ ಸಾರಿಗೆ ಇಲಾಖೆ ಆದೇಶಿಸಿತ್ತು.
ಇದೀಗ ಸೆಪ್ಟೆಂಬರ್ 15ರ ಗಡುವು ಮುಕ್ತಾಯಕ್ಕೆ ದಿನಗಣನೆ ಶುರುವಾಗಿದೆ. ಬಹುಶಃ ಈ ಬಾರಿ ಗಡುವು ವಿಸ್ತರಣೆ ಆಗುವ ಯಾವ ಸೂಚನೆಯೂ ಕಾಣಿಸುತ್ತಿಲ್ಲ. ಹೀಗಾಗಿ ಈಗಲೂ ಎಚ್‌ಎಸ್‌ಆರ್‌ಪಿ ಅಳವಡಿಕೆ ಮಾಡದ ವಾಹನ ಮಾಲೀಕರು ಗಡುವು ಮೀರಿದರೆ ದಂಡ ಪಾವತಿಸಬೇಕಾಗುತ್ತೆ!
ಇದನ್ನೂ ಓದಿ: 8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ ಪಡೆಯಿರಿ… Google Pay loan upto 8 lakh