Prize Money Scheme karnataka Govt : ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ‘ಪ್ರೋತ್ಸಾಹಧನ ಯೋಜನೆ’ (Prize Money) ಜಾರಿಗೊಳಿಸಿದೆ. ಪ್ರತೀ ವರ್ಷವೂ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಶ್ರೇಣಿಯಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರೈಜ್ ಮನಿ ನೀಡಲಾಗುತ್ತಿದೆ.
ಇದೀಗ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡಲ್ಪಡುವ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ವಿದ್ಯಾರ್ಥಿಗಳು ದಾಖಲಾತಿಗಳ ಸಮೇತ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸುವ ಮೂಲಕ ಇದರ ಪ್ರಯೋಜನ ಪಡೆಯಬಹುದಾಗಿದೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 15000 ಪ್ರೋತ್ಸಾಹಧನ
ಕಳೆದ 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60ಕ್ಕಿಂತ ಹೆಚ್ಚು ಪಡೆದು ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕೆ ಅರ್ಹರು.
ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 60ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ 7,000 ರೂಪಾಯಿ ಹಾಗೂ ಶೇ. 75ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ 15,000 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ.
ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ
2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಇನ್ನು ದ್ವಿತೀಯ ಪಿಯುಸಿ ಹಾಗೂ ಅಂತಿಮ ಪದವಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ಶೇಕಡಾ 60ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://swdservices.karnataka.gov.in/ ಮೂಲಕ ಈ ಕೂಡಲೇ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿ ಸಲ್ಲಿಸಿದ ದೃಢೀಕೃತ ದಾಖಲೆಗಳೊಂದಿಗೆ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕು ಕಚೇರಿ ಸಂಪರ್ಕಿಸುವ೦ತೆ ಇಲಾಖೆ ತಿಳಿಸಿದೆ.