RRB JE Recruitment 2024 : ರೈಲ್ವೆ ನೇಮಕಾತಿ ಮಂಡಳಿಯು (Railway Recruitment Board) 7,951 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ..
ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಜೂನಿಯರ್ ಇಂಜಿನಿಯರ್, ಸೂಪರ್ ವೈಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಿ ಒಟ್ಟು 7,951 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.
ರೈಲ್ವೆ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳು, ಆಯ್ಕೆಯಾದವರಿಗೆ ಸಿಗುವ ವೇತನ, ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಜಿ ಶುಲ್ಕ, ನೇಮಕಾತಿಯ ಪ್ರಮುಖ ದಿನಾಂಕಗಳು ಹಾಗೂ ಇತರೆ ಅಗತ್ಯ ಮಾಹಿತಿಗಳನ್ನು ಈ ಲೇಖನದಲ್ಲಿ ಸಂಪೂರ್ಣ ವಿವರಿಸಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಿರಿ.
ನೇಮಕಾತಿ ಸಂಕ್ಷಿಪ್ತ ವಿವರ
- ನೇಮಕಾತಿ ಇಲಾಖೆ : ರೈಲ್ವೆ ನೇಮಕಾತಿ ಮಂಡಳಿ
- ಹುದ್ದೆಗಳ ಸಂಖ್ಯೆ : 7,951
- ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
- ಉದ್ಯೋಗ ಸ್ಥಳ : ಭಾರತದಾದ್ಯಂತ
ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ವಿವರ
ರೈಲ್ವೆ ಇಲಾಖೆಯ ಮೆಕಾನಿಕಲ್, ಸಿವಿಲ್, ಮನುಫ್ಯಾಕ್ಚರಿಂಗ್ ಎಲೆಕ್ಟ್ರಿಕಲ್,ಕಂಪ್ಯೂಟರ್ ಸೈನ್ಸ್, ಇನ್ಫಾರ್ಮಶನ್ ಟೆಕ್ನಾಲಜಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳು ಹಾಗೂ ಕೆಮಿಕಲ್ ಸೂಪರ್ ವೈಸರ್, ಕೆಮಿಕಲ್ ಮೆಟಲ್ ರ್ಜಿಕಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ.
ವಿದ್ಯಾರ್ಹತೆ ವಿವರ
ರೈಲ್ವೆ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (Junior Engineer) ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆಯಾ ವಿಭಾಗದಲ್ಲಿ ಡಿಪ್ಲೋಮಾ ಅಥವಾ ಇಂಜಿನಿಯರಿ೦ಗ್ ಪದವಿ ಮುಗಿಸಿರುವವರು ಅರ್ಜಿ ಸಲ್ಲಿಸಬಹುದು. ಇದಲ್ಲದೆ ಸಾಮಾನ್ಯ ಬಿಎಸ್ಸಿ ಪದವಿ ಮುಗಿಸಿರುವವರು, ಬಿಸಿಎ ಪದವಿ ಮುಗಿಸಿರುವವರು ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ.
ಮಾಸಿಕ ವೇತನ ಮತ್ತು ವಯೋಮಿತಿ ವಿವರ
ಈ ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 35,400 ರೂಪಾಯಿಯಿಂದ 44,900 ರೂಪಾಯಿವರೆಗೆ ವೇತನವನ್ನು ನೀಡಲಾಗುತ್ತದೆ.
ಇನ್ನು ವಯೋಮಿತಿಯು 18 ರಿಂದ 36 ವರ್ಷದ ಒಳಗಿನ ಅಭ್ಯರ್ಥಿಗಳು ಈ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 500 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು. ವಿಶೇಷವೆಂದರೆ ಈ ನೇಮಕಾತಿಯ ಮೊದಲ ಹಂತದ ಕಂಪ್ಯೂಟರ್ ಬೇಸ್ಡ್ ಪರೀಕ್ಷೆಗೆ ಹಾಜರಾದ ನಂತರ 400 ರೂಪಾಯಿಯನ್ನು ನಿಮಗೆ ಹಿಂದಿರುಗಿಸಲಾಗುತ್ತದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ 250 ರೂಪಾಯಿ ನಿಗದಿಸಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯ ನಂತರ ನೀವು ಪಾವತಿಸಿದ ಅರ್ಜಿ ಶುಲ್ಕ 250 ರೂಪಾಯಿಯನ್ನು ಹಿಂದಿರುಗಿಸಲಾಗುತ್ತದೆ.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :
30-07-2024 - ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
29-08-2024
ಅಧಿಸೂಚನೆ : Download
ಅರ್ಜಿ ಸಲ್ಲಿಸುವ ಲಿಂಕ್ : Apply Now