SBI Junior Associates Recruitment 2025 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India -SBI) ದೇಶದ ವಿವಿಧ ವಲಯಗಳಲ್ಲಿ ಖಾಲಿ ಇರುವ ಬರೋಬ್ಬರಿ 14,344 ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಪೈಕಿ 253 ಹುದ್ದೆಗಳು ಕನ್ನಡಿಗರಿಗೆ ಮೀಸಲಾಗಿದ್ದು; ಪದವೀಧರ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.
ನೇಮಕಾತಿ ಕುರಿತ ಸಂಕ್ಷಿಪ್ತ ವಿವರ
- ನೇಮಕಾತಿ ಸಂಸ್ಥೆ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
- ಹುದ್ದೆಗಳ ಹೆಸರು : ಜೂನಿಯರ್ ಅಸೋಸಿಯೇಟ್ಸ್ (ಕ್ಲರ್ಕ್)
- ಒಟ್ಟು ಖಾಲಿ ಹುದ್ದೆಗಳು : 14,344 ಹುದ್ದೆಗಳು
- ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
- ಉದ್ಯೋಗ ಸ್ಥಳ : ಭಾರತದಾದ್ಯಂತ
ಕನ್ನಡಿಗರಿಗೆ 253 ಹುದ್ದೆಗಳು
ರಾಜ್ಯದಲ್ಲಿ (SBI Bangalore Zone) ಹೊಸ ಹುದ್ದೆಗಳ ಸಂಖ್ಯೆ 50 ಆಗಿದ್ದರೂ ಹಿಂಬಾಕಿ ಹುದ್ದೆಗಳ ಸಂಖ್ಯೆ 203 ಸೇರಿ ಒಟ್ಟಾರೆ 253 ಹುದ್ದೆಗಳು ಕನ್ನಡಿಗರಿಗೆ ಮೀಸಲಾಗಿವೆ. ಜತೆಗೆ ಜನರಲ್ ಇಂಗ್ಲಿಷ್ ವಿಷಯ ಹೊರತು ಪಡಿಸಿದರೆ ಕನ್ನಡದಲ್ಲಿಯೇ ಈ ಪರೀಕ್ಷೆಯನ್ನು ಬರೆದು ಪಾಸಾಗುವ ಅವಕಾಶ ನೀಡಲಾಗಿದೆ.
ದೇಶಾದ್ಯಂತ ಒಟ್ಟು 13,735 ಹುದ್ದೆಗಳಿದ್ದು, ಇದಲ್ಲದೆ 609 ಬ್ಯಾಕ್‌ಲಾಗ್ ಹುದ್ದೆಗಳಿವೆ. ಬೇರೆ ರಾಜ್ಯಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದಲ್ಲಿ ಆಯಾ ರಾಜ್ಯದ ಪ್ರಾದೇಶಿಕ ಭಾಷೆಯಲ್ಲಿ ಓದಲು, ಬರೆಯಲು, ಮಾತನಾಡಲು ಬರುವುದು ಕಡ್ಡಾಯವಾಗಿದೆ.
ವಿದ್ಯಾರ್ಹತೆ, ವಯೋಮಿತಿ ವಿವರ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯವಾಗಿದ್ದು, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಅನ್ವಯವಾಗುವಂತೆ ಕನಿಷ್ಠ 20 ಗರಿಷ್ಠ 28 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ರಿಂದ 15 ವರ್ಷ ವಯೋಮಿತಿ ಸಡಿಲಿಕೆ ಇದೆ.
ಮಾಸಿಕ ವೇತನವೆಷ್ಟು?
ಎಸ್‌ಬಿಐ ಕ್ಲರ್ಕ್ ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳಿಗೆ 26,730- 64,480 ರೂ. ವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಜತೆಗೆ ಇತರ ಭತ್ಯೆಗಳು ಅನ್ವಯವಾಗಲಿವೆ.
ಇದನ್ನೂ ಓದಿ: SSLC ಪಾಸಾದ ಮಹಿಳೆಯರಿಗೆ LIC ಬಿಮಾ ಸಖಿ ನೇಮಕಾತಿಗೆ ಅರ್ಜಿ ಆಹ್ವಾನ | ಕೇಂದ್ರ ಸರ್ಕಾರದ ಹೊಸ ಯೋಜನೆ LIC BIMA SAKHI Scheme
ಆಯ್ಕೆ ಪ್ರಕ್ರಿಯೆ ಹೇಗೆ?
ಎಸ್‌ಬಿಐ ಕ್ಲರ್ಕ್ ಹುದ್ದೆಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಭಾಷಾ ಪ್ರಾವೀಣ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಪೂರ್ವಭಾವಿ ಪರೀಕ್ಷೆಯನ್ನು 100 ಅಂಕಗಳಿಗೆ ಮತ್ತು ಮುಖ್ಯ ಪರೀಕ್ಷೆಯನ್ನು 200 ಅಂಕಗಳಿಗೆ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದವರನ್ನು ಭಾಷಾ ಪ್ರಾವೀಣ್ಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ.
ಭಾಷಾ ಪರೀಕ್ಷೆಯನ್ನು ತಾತ್ಕಾಲಿಕ ಆಯ್ಕೆ ಪಟ್ಟಿ ನಂತರ ಹುದ್ದೆಗೆ ಸೇರುವ ಮೊದಲು ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆಯದಿದ್ದರೆ ಅಭ್ಯರ್ಥಿಗಳನ್ನು ಅನರ್ಹಗೊಳಿಸಲಾಗುತ್ತದೆ. 10ನೇ ಅಥವಾ 12ನೇ ತರಗತಿಯ ಅಂಕಪಟ್ಟಿ / ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿದ ಪ್ರಮಾಣಪತ್ರದ ಪುರಾವೆಗಳನ್ನು ಹೊಂದಿದವರು ಭಾಷಾ ಪರೀಕ್ಷೆಗೆ ಹಾಜರಾಗಬೇಕಿಲ್ಲ.
ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳು
ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಪೂರ್ವಭಾವಿ ಪರೀಕ್ಷೆಯನ್ನು ಫೆಬ್ರವರಿಯಲ್ಲಿ, ಮುಖ್ಯ ಏಪ್ರಿಲ್‌ನಲ್ಲಿ ನಡೆಸುವ ಸಾಧ್ಯತೆಗಳಿವೆ.
ಅರ್ಜಿ ಸಲ್ಲಿಸಲು ಕೊನೇ ದಿನ : 07-01-2025
ಅಧಿಸೂಚನೆ : Download
ಹೆಚ್ಚಿನ ಮಾಹಿತಿಗೆ https://sbi.co.in/web/careers