NewsSchemes

10+1 ಕುರಿ, ಮೇಕೆ ಸಾಕಾಣಿಕೆಗೆ ಸಹಾಯಧನ | ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ Sheep and Goat Farming Subsidy KSWDCL Scheme

WhatsApp Group Join Now
Telegram Group Join Now

Sheep and Goat Farming Subsidy KSWDCL Scheme : ಕುರಿ ಮೇಕೆ ಸಾಕಾಣಿಕೆದಾರರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುತ್ತಿರುವ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ (Karnataka Sheep & Wool Development Corporation Ltd) ಜಿಲ್ಲಾವಾರು ಘಟಕಗಳಿಂದ 2024-25ನೇ ಸಾಲಿನಲ್ಲಿ ಗಿರಿಜನ ಉಪಯೋಜನೆ ಅಡಿಯಲ್ಲಿ ಕುರಿ ಅಥವಾ ಮೇಕೆ ಘಟಕ ಅನುಷ್ಠಾನಗೊಳಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಹಾಯಧನವೆಷ್ಟು ಮತ್ತು ಯಾರೆಲ್ಲ ಅರ್ಹರು?

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಾಗಿರಬೇಕು. ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದವರಾಗಿದ್ದು; ಅರ್ಜಿದಾರರು 18 ರಿಂದ 60 ವರ್ಷ ವಯೋಮಿತಿಯಲ್ಲಿರಬೇಕು. ಕುರಿ ಸೊಸೈಟಿಯ ಮಹಿಳಾ ಮತ್ತು ಪುರುಷ ಸದಸ್ಯರು ಅರ್ಜಿ ಸಲ್ಲಸಬಹುದು.

ಗಿರಿಜನ ಉಪಯೋಜನೆ ಅಡಿಯಲ್ಲಿ ಈ ಪ್ರಯೋಜನ ಲಭ್ಯವಿದ್ದು; 10+1 ಕುರಿ ಅಥವಾ ಮೇಕೆ ಘಟಕ ಸ್ಥಾಪನೆಗೆ ತಗುಲುವ ವೆಚ್ಚದ ಶೇ.90ರಷ್ಟು ಮೊತ್ತವನ್ನು ನಿಗಮದ ವತಿಯಿಂದ ಸಹಾಯಧನ (Subsidy) ರೂಪದಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ದೊರೆಯಲಿದೆ.

Sheep and Goat Farming Subsidy KSWDCL Scheme

ಇದನ್ನೂ ಓದಿ: ಮಹಿಳೆಯರಿಗೆ ಉಜ್ವಲ ಉಚಿತ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ… Pradhan Mantri Ujjwala Yojana

ಹೇಗೆ ಅರ್ಜಿ ಸಲ್ಲಿಸಬೇಕು?

ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್, ಮತದಾರರ ಚೀಟಿ, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, ಬ್ಯಾಂಕ್ ಖಾತೆ ಪಾಸ್‌ಬುಕ್, ಕುರಿ ಸೊಸೈಟಿ ಸದಸ್ಯತ್ವದ ಪತ್ರದೊಂದಿಗೆ ಫಲಾನುಭವಿಗಳು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ, ಪಶು ಆಸ್ಪತ್ರೆ ಅಥವಾ ಆಯಾ ಜಿಲ್ಲಾ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಲು ಒಂದೊ೦ದು ಜಿಲ್ಲೆ, ತಾಲ್ಲೂಕುಗಳಲ್ಲಿ ಒಂದೊ೦ದು ದಿನಾಂಕ ನಿಗದಿಪಡಿಸಲಾಗಿದ್ದು; ಬಹುತೇಕ ಡಿಸೆಂಬರ್ 15 ಮತ್ತು 21ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಕೋಳಿ ಸಾಕಣೆಗೆ 25 ಲಕ್ಷ, ಕುರಿ-ಮೇಕೆ ತಳಿ ಸಂವರ್ಧನೆಗೆ 50 ಲಕ್ಷ ಆರ್ಥಿಕ ನೆರವು National Livestock Mission NLM

WhatsApp Group Join Now
Telegram Group Join Now

Related Posts