EducationNews

1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ State Prematric Scholarship 2024

WhatsApp Group Join Now
Telegram Group Join Now

State Prematric Scholarship 2024 : 2024-25ನೇ ಸಾಲಿನ 1ನೇ ತರಗತಿಯಿಂದ 8ನೇ ತರಗತಿ ವರೆಗಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ (Pre Matric Scholarship) ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು (Minority Welfare Department Karnataka) ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಕೇಂದ್ರ ಸರ್ಕಾರದಿಂದ ಈಗಾಗಲೇ ರಾಜ್ಯದಲ್ಲಿನ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆ ಪ್ರಮಾಣವಾಗಿ ಏರುತ್ತಿರುವುದರಿಂದ ಅರ್ಜಿ ಹಾಕುವ ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ನೀಡಲು ಕೇಂದ್ರ ಸರ್ಕಾರವು ಒದಗಿಸುವ ಆಯವ್ಯಯದಲ್ಲಿ ಅವಕಾಶವಾಗುತ್ತಿಲ್ಲ.

ಹೀಗಾಗಿ ಕೇಂದ್ರ ಸರ್ಕಾರದಿಂದ ನೀಡುವ ವಿದ್ಯಾರ್ಥಿ ವೇತನ ಪಡೆಯಲಾಗದ ರಾಜ್ಯದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದೆ. ಅದರಂತೆ, ರಾಜ್ಯದ ವತಿಯಿಂದ ನೀಡಲಾಗುವ 2024-25ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಸದರಿ ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. 1ನೇ ತರಗತಿಯಿಂದ 8ನೇ ತರಗತಿ ವರೆಗೆ ಓದುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್’ಗೆ ಅರ್ಹರು.

ಅಲ್ಪಸಂಖ್ಯಾತ ಸಮುದಾಯಕ್ಕೆ ಒಳಪಡುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಸಬಹುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 1 ಲಕ್ಷ ರೂಪಾಯಿಗಳನ್ನು ಮೀರಿರಬಾರದು.

ಅರ್ಜಿ ಸಲ್ಲಿಕೆಯ ಮಾನದಂಡಗಳು

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸಬಹುದು. ಕಳೆದ ವರ್ಷದಲ್ಲಿ ವಿದ್ಯಾರ್ಥಿವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು Auto Renewal ಎಂದು ಪರಿಗಣಿಸಲಾಗುವುದರಿಂದ ಸದರಿ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಹಿಂದಿನ ವರ್ಷ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಕೂಡ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಹಾಗೂ NPCI Mapping Active ಆಗಿರಬೇಕು.

ಅರ್ಜಿ ಸಲ್ಲಿಕೆ ಹೇಗೆ?

ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ https://dom.karnataka.gov.in ಹಾಗೂ ಹತ್ತಿರದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ :
    29-08-2024
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :
    31-10-2024
ಅರ್ಜಿ ಸಲ್ಲಿಕೆ ಪ್ರಮುಖ ಲಿಂಕುಗಳು

ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (SSP) : Apply Now
ಕರ್ನಾಟಕ ಅಲ್ಪಸಂಖ್ಯಾತರ ನಿರ್ದೇಶನಾಲಯ : Apply Now

WhatsApp Group Join Now
Telegram Group Join Now

Related Posts

error: Content is protected !!