Supreme Court Recruitment 2024 : ಭಾರತದ ಸವೋಚ್ಛ ನ್ಯಾಯಾಲಯ ಸುಪ್ರೀಂ ಕೋರ್ಟ್’ನ (Supreme Court of India) ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು; ಪದವೀಧರರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ‘ಕೋರ್ಟ್ ಮಾಸ್ಟರ್’ ಸೇರಿದಂತೆ 100ಕ್ಕೂ ಹೆಚ್ಚು ವಿವಿಧ ಹುದ್ದೆಗಳ ನೇಮಕಾತಿ ನಡೆಯಲಿದೆ.
ಹುದ್ದೆಗಳ ವಿವರ
- ಕೋರ್ಟ್ ಮಾಸ್ಟರ್ : 31
- ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ : 33
- ಪರ್ಸನಲ್ ಅಸಿಸ್ಟೆಂಟ್ : 43
- ಒಟ್ಟು ಹುದ್ದೆಗಳು : 107
ಅರ್ಜಿ ಸಲ್ಲಿಕೆಗೆ ಅರ್ಹತೆಗಳೇನು?
ಕಾನೂನು ಪದವಿ ಪಡೆದಿದ್ದು, ಕನಿಷ್ಠ ಐದು ವರ್ಷ ಪ್ರೆöÊವೇಟ್ ಸೆಕ್ರೆಟರಿ/ ಸೀನಿಯರ್ ಪಿಎ/ಸೀನಿಯರ್ ಸ್ಟೆನೋಗ್ರಾಫರ್ ಆಗಿ ಕಾರ್ಯನಿರ್ವಹಿಸಿದ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ಸರಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ ಅನುಭವವುಳ್ಳವರಿಂದ ಅರ್ಜಿಗಳನ್ನು ನಿರೀಕ್ಷಿಸಲಾಗಿದೆ. ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಮತ್ತು ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.
ವಯೋಮಿತಿ ಎಷ್ಟಿರಬೇಕು?
ಕೋರ್ಟ್ ಮಾಸ್ಟರ್ ಹುದ್ದೆಗಳಿಗೆ 30ರಿಂದ 45 ವರ್ಷದೊಳಗಿನವರು, ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಮತ್ತು ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳಿಗೆ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕವೆಷ್ಟು?
ಎಸ್ಸಿ, ಎಸ್ಟಿ, ಮಾಜಿ ಸೈನಿಕ ಅಭ್ಯರ್ಥಿಗಳು, ವಿಶೇಷಚೇತನರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರು ಅರ್ಜಿ ಸಲ್ಲಿಸುವುದಾದರೆ 250 ರೂ. ಹಾಗೂ ಉಳಿದ ವರ್ಗದವರಿಗೆ 1,000 ರೂ. ಶುಲ್ಕ ನಿಗದಿಪಡಿಸಲಾಗಿದೆ.
ನೇಮಕ ಹೇಗೆ?
ಲಿಖಿತ ಪರೀಕ್ಷೆ ಮತ್ತು ಟೈಪಿಂಗ್ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ರಾಜ್ಯದಲ್ಲಿ ಮೈಸೂರು ಮತ್ತು ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳಿರಲಿವೆ. ಪ್ರತಿ ಹುದ್ದೆಗಳಿಗೂ ಪ್ರತ್ಯೇಕ ಪಠ್ಯಕ್ರಮವನ್ನು ಆಧರಿಸಿ ಪರೀಕ್ಷೆ ನಡೆಯಲಿದೆ. ವಸ್ತುನಿಷ್ಠ ಮಾದರಿ ಬಹು ಆಯ್ಕೆಯ 100 ಪ್ರಶ್ನೆಗಳಿಗೆ ಅಭ್ಯರ್ಥಿಗಳು ಉತ್ತರಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 04-12-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-12-2024